ಬೆಂಗಳೂರು, ಡಿ. 21 (DaijiworldNews/AA): ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಹೆಸರಿನಲ್ಲಿ 'ಡೀಪ್ ಫೇಕ್' ವಿಡಿಯೋ ಮಾಡಿದ್ದ ವ್ಯಕ್ತಿ ಹಾಗೂ ಸಾಮಾಜಿಕ ಜಾಲತಾಣ ಖಾತೆಯ ವಿರುದ್ಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಮಹಾಲಕ್ಷ್ಮಿ ಪೊಲೀಸ್ ಠಾಣೆಯ ಸಾಮಾಜಿಕ ಜಾಲತಾಣ ವಿಭಾಗದಲ್ಲಿ ಡಿ.5ರಂದು ಫೇಸ್ಬುಕ್ ಖಾತೆಗಳನ್ನು ವಿಕ್ಷಣೆ ಮಾಡುತ್ತಿದ್ದಾಗ 'ದೋನೆ ಡ್ರಿಮ್ಸ್' ಖಾತೆಯಲ್ಲಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೇಂದ್ರ ಸರ್ಕಾರದ ಹಣಕಾಸು ಯೋಜನೆಯನ್ನು ಉದ್ದೇಶಿಸಿ ಮಾತನಾಡಿರುವ ವಿಡಿಯೋ ಹರಿಬಿಟ್ಟಿದ್ದಾರೆ. ಅಲ್ಲದೇ ಪೇಜ್ನಲ್ಲಿ ಪೋಸ್ಟ್ ಮಾಡಲಾದ ವಿಡಿಯೋ ಕೆಳಗೆ ಲಿಂಕ್ವೊಂದನ್ನ ನೀಡಿದ್ದು, ಹಣ ಹೂಡಿಕೆ ಮಾಡಿ ಕೆಲಸ ಮಾಡದೆ ಮನೆಯಲ್ಲೇ ಕುಳಿತು ಹೆಚ್ಚಿನ ಲಾಭ ಪಡೆಯಬಹುದು ಎಂದು ಸುಳ್ಳು ಜಾಹೀರಾತು ನೀಡಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣದ ಉಸ್ತುವಾರಿ ಪಿಎಸ್ಐ ರಾಕೇಶ್ ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ. ಈ ಬಗ್ಗೆ ನಗರ ಪೊಲೀಸ್ ಆಯುಕ್ತರ ಗಮನಕ್ಕೆ ತಂದು ಪ್ರಾಥಮಿಕ ತನಿಖೆ ನಡೆಸಿದ ವೇಳೆ ರಾಷ್ಟ್ರಪತಿ ಅವರ ಭಾಷಣದ ವಿಡಿಯೋವನ್ನು ಎಐ ತಂತ್ರಜ್ಞಾನದ ಮೂಲಕ ಡೀಪ್ಫೇಕ್ ಮಾಡಿರುವುದು ಬೆಳಕಿಗೆ ಬಂದಿದೆ.