ಬೆಂಗಳೂರು, ಡಿ. 21 (DaijiworldNews/AA): ನನ್ನ ಸ್ಟ್ಯಾಂಡ್ ಬದಲಾಗಲ್ಲ, ನಾನು ಯಾವಾಗಲೂ ಸಿದ್ಧರಾಮಯ್ಯ ಪರವೇ. ಡಿಕೆ ಶಿವಕುಮಾರ್ ಏನೇ ಪ್ರಯತ್ನ ಮಾಡಿದ್ರೂ ನನ್ನ ಸ್ಟ್ಯಾಂಡ್ ಬದಲಾಗಲ್ಲ. ಹಿಂದೆ ನೀಡಿದ್ದ ಹೇಳಿಕೆಗಳಿಗೆ ಈಗಲೂ ಬದ್ಧ ಎಂದು ಮಾಜಿ ಸಚಿವ ಕೆ.ಎನ್ ರಾಜಣ್ಣ ಸ್ಪಷ್ಟನೆ ನೀಡಿದ್ದಾರೆ.

ಡಿಸಿಎಂ ಡಿಕೆಶಿ ಭೇಟಿ ವಿಚಾರಕ್ಕೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ನಾನು ಯಾವುದಕ್ಕೂ ರಾಜಿ ಆಗಲ್ಲ, ಹಿಂದೆ ಆಡಿದ ಮಾತಿಗೆ ಈಗಲೂ ಬದ್ಧ. ನಾನು ಯಾವಾಗಲೂ ಸಿದ್ದರಾಮಯ್ಯ ಪರವೇ" ಎಂದು ತಿಳಿಸಿದ್ದಾರೆ.
"ಡಿಕೆ ಶಿವಕುಮಾರ್ ನಿನ್ನೆ ಭೇಟಿ ಮಾಡಿದ್ದರು. ಅವರೇನು ಹುಡಿಕಿಕೊಂಡು ಬಂದಿರಲಿಲ್ಲ. ಅವರು ಪಾರ್ಟಿ ಅಧ್ಯಕ್ಷರು ಮಾತಾಡ್ತಾರೆ. ಯಾರನ್ನೂ ಬೇಕಾದ್ರು ಮಾತಾಡಿಸಬಹುದು. ಪಕ್ಷ ಸಂಘಟನೆ ವಿಚಾರವಾಗಿ ಭೇಟಿ ಮಾಡಿದ್ದರು. ಪಕ್ಷ ಸಂಘಟನೆ ಮಾಡೋಣ ಅಂದರು, ನಾನು ಆಯ್ತು ಅಂದೆ. ಅದರ ಹೊರತಾಗಿ ಬೇರೆ ಯಾವುದೇ ವಿಚಾರಗಳು ಚರ್ಚೆಯಾಗಿಲ್ಲ" ಎಂದರು.
"ನಮ್ಮ ಸ್ಟ್ಯಾಂಡ್ ಸಿದ್ದರಾಮಯ್ಯ ಪರವಾಗಿಯೇ ಇದೆ. ಬೆಳಗಾವಿಯಲ್ಲಿ ಸತೀಶ್ ಜಾರಕಿಹೊಳಿ ಮನೆಗೆ ಎಲ್ಲರೂ ಊಟಕ್ಕೆ ಹೋಗಿದ್ದರು. ಅದು ರಾಜಕೀಯ ಅಲ್ಲ. ಅದೊಂದು ಸೌಜನ್ಯಕ್ಕೆ ಅಷ್ಟೆ. ಸಿಎಂ ವಿಚಾರವನ್ನ ಹೈಕಮಾಂಡ್ ನಿರ್ಧಾರ ಮಾಡುತ್ತೆ. ಸಿಎಂ ಕೂಡ ನಾನೇ 5 ವರ್ಷ ಇರ್ತೀನಿ ಅಂತ ಪದೇ ಪದೇ ಹೇಳಿದ್ದಾರೆ. ಹೈಕಮಾಂಡ್ ಹೇಳೋವರೆಗೆ ನಾನು ಕಾಯ್ತೀನಿ" ಎಂದು ಹೇಳಿದರು.