ಬೆಂಗಳೂರು, ಡಿ. 21 (DaijiworldNews/AA): ಸೋಮವಾರದಿಂದಲೇ ಪ್ರತಿ ಮನೆ 'ಗೃಹಲಕ್ಷ್ಮಿ'ಯರ ಖಾತೆಗಳಿಗೆ 1 ಕಂತಿನ ಹಣ ಬಿಡುಗಡೆ ಮಾಡುವುದಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ನಾನು ಯಾವಾಗಲೂ ಕಂತು ಅಂತ ಹೇಳ್ತೀನಿ. ತಿಂಗಳ ಹೆಸರು ಹೇಳಲ್ಲ. ಈಗಾಗಲೇ ಆರ್ಥಿಕ ಇಲಾಖೆ ಅವರು ನಮಗೆ 24ನೇ ಕಂತಿನ ಹಣ ಬಿಡುಗಡೆ ಮಾಡಿದ್ದಾರೆ" ಎಂದು ತಿಳಿಸಿದರು.
"ರಾಜ್ಯದ 1.26 ಕೋಟಿ ಗೃಹಲಕ್ಷ್ಮಿಯರ ಖಾತೆಗೆ 24ನೇ ಕಂತಿನ ಹಣ ಬಿಡುಗಡೆ ಆಗಲಿದೆ. ಸೋಮವಾರದಿಂದ (ಡಿ.22) ಮುಂದಿನ ಶನಿವಾರದೊಳಗೆ ಹಣ ಬಿಡುಗಡೆಯಾಗಲಿದೆ" ಎಂದು ಹೇಳಿದರು.