ಅಯೋಧ್ಯೆ, ಜ. 10 (DaijiworldNews/ AK): ರಾಮ ಮಂದಿರದ ಸುತ್ತ 15 ಕಿಮೀ ವ್ಯಾಪ್ತಿಯಲ್ಲಿ ಆಲ್ಕೋಹಾಲ್, ಮಾಂಸಾಹಾರ ಪದಾರ್ಥಗಳ ಮಾರಾಟವನ್ನು ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರ ನಿಷೇಧಿಸಿದೆ.

‘ಪಂಚಕೋಸಿ ಪರಿಕ್ರಮ’ದ ಅಡಿಯಲ್ಲಿ ಗುರುತಿಸಲಾದ ಪ್ರದೇಶಗಳಲ್ಲಿ ಮಾಂಸಾಹಾರವನ್ನು ಪೂರೈಸುವ ಆನ್ಲೈನ್ ಫುಡ್ ಡೆಲಿವರಿ ಪ್ಲಾಟ್ಫಾರ್ಮ್ಗಳ ಬಗ್ಗೆ ಪದೇ ಪದೇ ದೂರುಗಳು ಬಂದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.
ಅಯೋಧ್ಯೆಯಲ್ಲಿರುವ ಕೆಲವು ಹೋಟೆಲ್ಗಳು ಮತ್ತು ಹೋಂಸ್ಟೇಗಳು ಅತಿಥಿಗಳಿಗೆ ಮಾಂಸಾಹಾರಿ ಆಹಾರ ಮತ್ತು ಆಲ್ಕೋಹಾಲ್ ನೀಡುತ್ತಿವೆ. ಇದನ್ನು ತಕ್ಷಣ ನಿಲ್ಲಿಸಬೇಕೆಂದು ಅಧಿಕಾರಿಗಳು ಹೋಟೆಲ್ಗಳಿಗೆ ಮತ್ತು ಹೋಂಸ್ಟೇಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.
ಅಯೋಧ್ಯೆ ಮತ್ತು ಫೈಜಾಬಾದ್ ಅನ್ನು ಸಂಪರ್ಕಿಸುವ ಮಾರ್ಗವಾದ 14 ಕಿ.ಮೀ. ರಾಮ್ ಪಥ್ನಲ್ಲಿ ಮದ್ಯ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಲು ಅಯೋಧ್ಯೆ ಪುರಸಭೆಯು ಮೇ 2025ರಲ್ಲಿಯೇ ನಿರ್ಧಾರ ತೆಗೆದುಕೊಂಡಿದ್ದರೂ, ಈ 9 ತಿಂಗಳಲ್ಲಿ ಮದ್ಯ ಮಾರಾಟದ ಮೇಲಿನ ನಿಷೇಧವನ್ನು ಸರಿಯಾಗಿ ಜಾರಿಗೆ ತರಲಾಗಿರಲಿಲ್ಲ. ಈ ಬಗ್ಗೆ ಸ್ಥಳೀಯರು ದೂರು ನೀಡಿದ ಬಳಿಕ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.