ವಾರಣಾಸಿ, ಜ. 12 (DaijiworldNews/TA): 216 ಪ್ರಯಾಣಿಕರನ್ನು ಹೊತ್ತು ಬೆಂಗಳೂರಿಗೆ ಹೊರಟಿದ್ದ ಇಂಡಿಗೋ ಏರ್ಲೈನ್ಸ್ ವಿಮಾನ ಹಾರಾಟದ ವೇಳೆ ಹಕ್ಕಿ ಡಿಕ್ಕಿ ಹೊಡೆದ ಪರಿಣಾಮ, ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.

ಈ ಘಟನೆ ಭಾನುವಾರ ರಾತ್ರಿ ನಡೆದಿದ್ದು, ವಿಮಾನ ಸುರಕ್ಷಿತವಾಗಿ ಇಳಿದ ತಕ್ಷಣ ಅದರಲ್ಲಿದ್ದ ಎಲ್ಲಾ 216 ಪ್ರಯಾಣಿಕರನ್ನು ಯಾವುದೇ ಅಪಾಯವಿಲ್ಲದೆ ಸ್ಥಳಾಂತರಿಸಲಾಗಿದೆ ಎಂದು ವಿಮಾನ ನಿಲ್ದಾಣ ನಿರ್ದೇಶಕ ಪುನೀತ್ ಗುಪ್ತಾ ಮಾಹಿತಿ ನೀಡಿದ್ದಾರೆ. ಘಟನೆಯ ಕುರಿತು ವಿಮಾನಯಾನ ಇಲಾಖೆ ಹಾಗೂ ಏರ್ಲೈನ್ ಅಧಿಕಾರಿಗಳು ಮುಂದಿನ ತನಿಖೆ ನಡೆಸುತ್ತಿದ್ದಾರೆ.