ಬಳ್ಳಾರಿ,ಜ.17 (DaijiworldNews/ AK): ಜನಾರ್ಧನ ರೆಡ್ಡಿ ಮತ್ತು ಅವರ ಆತ್ಮೀಯ ಸ್ನೇಹಿತ ಬಿ.ಶ್ರೀರಾಮುಲು ಅವರು ಒಂದಾಗಿದ್ದಾರೆ. ಇದರಿಂದ ಕಾಂಗ್ರೆಸ್ಸಿನ ಬಳ್ಳಾರಿ ಜಿಲ್ಲೆಯ ನಾಯಕರ ಕುರ್ಚಿ ಅಲ್ಲಾಡತೊಡಗಿದೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಬಸವರಾಜ ಬೊಮ್ಮಾಯಿ ಅವರು ವಿಶ್ಲೇಷಿಸಿದ್ದಾರೆ.

ಬಿಜೆಪಿ ವತಿಯಿಂದ ಬಳ್ಳಾರಿಯಲ್ಲಿ ಇಂದು ಕಾಂಗ್ರೆಸ್ ಸರಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಮುಲು ಅವರ ವೇಗ- ಜನಾರ್ಧನ ರೆಡ್ಡಿಯವರ ಶಕ್ತಿ, ಬಿರುಗಾಳಿ ಮತ್ತು ಬೆಂಕಿಯಂತೆ ಎಂದು ಅವರು ನುಡಿದರು.
ಇದೇ ಕಾರಣಕ್ಕಾಗಿ ಬಳ್ಳಾರಿಯಲ್ಲಿ ಈ ಕೃತ್ಯ ನಡೆದಿದೆ ಎಂದು ತಿಳಿಸಿದರು. ಅವರ ಬಳಿ ಎಷ್ಟು ಗುಂಡಿದೆಯೋ ನಾವೂ ನೋಡೋಣ ಎಂದು ಸವಾಲು ಹಾಕಿದರು. ಅವರೆಷ್ಟೇ ಗುಂಡು ಹೊಡೆದರೂ ನಮ್ಮ ಶಕ್ತಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಸವಾಲು ಹಾಕಿದರು. ಹುಬ್ಬಳ್ಳಿಯಲ್ಲಿ ಪೊಲೀಸರು ದಲಿತ ಹೆಣ್ಮಗಳ ಬಟ್ಟೆ ತೆಗೆದಿದ್ದಾರೆ. ಅವರೇ ತೆಗೆದಿದ್ದಾರೆಂದು ಕಮೀಷನರ್ ಸುಳ್ಳು ಕಟ್ಟು ಕಥೆ ಹೇಳಿದ್ದಾರೆ ಎಂದು ಆಕ್ಷೇಪಿಸಿದರು.