ಕೋಲ್ಕತ್ತಾ,ಜ.17 (DaijiworldNews/AK): ಕೋಲ್ಕತ್ತಾ ಬಳಿಯ ಹೌರಾ ಮತ್ತು ಗುವಾಹಟಿಯ ಕಾಮಾಖ್ಯ ಜಂಕ್ಷನ್ ನಡುವೆ ಸಂಪರ್ಕ ಕಲ್ಪಿಸುವ ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಹಸಿರು ನಿಶಾನೆ ತೋರಿಸಿದರು.

ಈ ಅತ್ಯಾಧುನಿಕ ಸೇವೆಯನ್ನು ರಾತ್ರಿಯಿಡೀ ಸಂಚರಿಸುವ ಸಂಪರ್ಕವಾಗಿ ವಿನ್ಯಾಸಗೊಳಿಸಲಾಗಿದೆ. ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ನಡುವೆ ಹೈಸ್ಪೀಡ್ ರೈಲು ಸಂಪರ್ಕವನ್ನು ಸ್ಥಾಪಿಸಲಾಗಿದೆ. ಇವೆರಡೂ ಪ್ರಸ್ತುತ ಚುನಾವಣೆ ನಡೆಯಲಿರುವ ರಾಜ್ಯಗಳಾಗಿವೆ.
ಪಶ್ಚಿಮ ಬಂಗಾಳದ ಮಾಲ್ಡಾ ಪಟ್ಟಣದಿಂದ ಭಾರತದ ಮೊದಲ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಹಸಿರು ನಿಶಾನೆ ತೋರಿದರು. ಇಲ್ಲಿಂದ ಗುವಾಹಟಿ-ಹೌರಾ ವಂದೇ ಭಾರತ್ ಸ್ಲೀಪರ್ ರೈಲಿಗೆ ಚಾಲನೆ ಕೊಟ್ಟರು.
ಆಧುನಿಕ ಭಾರತದ ಹೆಚ್ಚುತ್ತಿರುವ ಸಾರಿಗೆ ಅಗತ್ಯಗಳನ್ನು ಪೂರೈಸಲು ಅಭಿವೃದ್ಧಿಪಡಿಸಲಾದ ಸಂಪೂರ್ಣ ಹವಾನಿಯಂತ್ರಿತ ವಂದೇ ಭಾರತ್ ಸ್ಲೀಪರ್ ರೈಲು, ಪ್ರಯಾಣಿಕರಿಗೆ ಕಡಿಮೆ ದರದಲ್ಲಿ ವಿಮಾನಯಾನದಂತಹ ಪ್ರಯಾಣದ ಅನುಭವವನ್ನು ನೀಡಲು ಸಜ್ಜಾಗಿದೆ. ಇದು ದೂರದ ಪ್ರಯಾಣಗಳನ್ನು ವೇಗವಾಗಿ, ಸುರಕ್ಷಿತವಾಗಿ ಮತ್ತು ಹೆಚ್ಚು ಅನುಕೂಲಕರವಾಗಿಸುತ್ತದೆ.