ಬೆಂಗಳೂರು, ಜು30(Daijiworld News/SS): ವಿಧಾನಸಭೆಯ ಸ್ಪೀಕರ್ ಆಗಿದ್ದ ರಮೇಶ್ ಕುಮಾರ್ ಜು.29ರಂದು ರಾಜೀನಾಮೆ ನೀಡಿದ್ದು, ಅವರಿಂದ ತೆರವಾದ ಸ್ಥಾನಕ್ಕೆ ಜುಲೈ 31ರಂದು ಚುನಾವಣೆ ನಿಗದಿಪಡಿಸಿ ರಾಜ್ಯಪಾಲ ವಜುವಾಯಿ ವಾಲಾ ಅವರು ಆದೇಶ ಹೊರಡಿಸಿದ್ದಾರೆ.
ನಾಮಪತ್ರ ಸಲ್ಲಿಕೆ ಆರಂಭಗೊಂಡಿದ್ದು, ಬುಧವಾರ ಬೆಳಗ್ಗೆ 11 ಗಂಟೆಗೆ ಸ್ಪೀಕರ್ ಆಯ್ಕೆಗೆ ಚುನಾವಣೆ ನಡೆಯಲಿದೆ. ಇಂದು ಬೆಳಗ್ಗೆ 12 ಗಂಟೆಯವರೆಗೆ ವಿಧಾನಸಭಾ ಕಾರ್ಯದರ್ಶಿಗೆ ನಾಮಪತ್ರ ಸಲ್ಲಿಸಬಹುದು ಎಂದು ವಿಧಾನಸಭೆಯಲ್ಲಿ ಉಪಸಭಾಧ್ಯಕ್ಷ ಕೃಷ್ಣಾ ರೆಡ್ಡಿ ಘೋಷಿಸಿದ್ದಾರೆ.
ಕೆ.ಆರ್.ರಮೇಶ್ ಕುಮಾರ್ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ವಿಶ್ವಾಸಮತ ನಿರ್ಣಯ ಮಂಡಿಸಿ ಅದರಲ್ಲಿ ಯಶಸ್ಸು ಕಂಡ ಬಳಿಕ ರಮೇಶ್ ಕುಮಾರ್ ಸ್ಪೀಕರ್ ಸ್ಥಾನದಿಂದ ನಿರ್ಗಮಿಸಿದ್ದಾರೆ. ಮುಂದಿನ ಮೂರು ತಿಂಗಳಿಗೆ ಹಣಕಾಸು ಮಸೂದೆ ಮತ್ತು ಲೇಖಾನುದಾನ ಕೂಡ ಇದೇ ವೇಳೆ ಧ್ವನಿ ಮತದ ಮೂಲಕ ಅಂಗೀಕಾರಗೊಂಡಿದೆ.
ನೂತನ ಸ್ಪೀಕರ್ ಆಗಿ ಬಿಜೆಪಿ ಶಾಸಕ ಕೆ.ಜಿ.ಬೋಪಯ್ಯ ಅವರು ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.