ಮುಂಬೈ, ಫೆ. 25 (DaijiworldNews/AA): ಅಜಿತ್ ಪವಾರ್ ನಿಧನದಿಂದ ತೆರವಾಗಿರುವ ಬಾರಾಮತಿ ವಿಧಾನಸಭಾ ಉಪಚುನಾವಣೆಗೆ ಉಪಮುಖ್ಯಮಂತ್ರಿ ಸುನೇತ್ರಾ ಪವಾರ್ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆಮಾಡಲಾಗಿದೆ.

ಮಂಗಳವಾರ ನಡೆದ ಪಕ್ಷದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, "ಸುನೇತ್ರಾ ಪವಾರ್ ಅವರ ಹೆಸರನ್ನು ರಾಷ್ಟ್ರೀಯ ಅಧ್ಯಕ್ಷೆಯಾಗಿ ಅಧಿಕೃತವಾಗಿ ಅನುಮೋದಿಸಲಾಗುವುದು ಎಂದು ದೃಢಪಡಿಸಿವೆ. ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಅವರು ನಿಧನರಾದ ನಂತರ ಪಕ್ಷದೊಳಗಿನ ಇತ್ತೀಚಿನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಪದೋನ್ನತಿ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ. ನಂತರ ಪಕ್ಷವು ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಅವರ ಹೆಸರನ್ನು ಸರ್ವಾನುಮತದಿಂದ ಒಪ್ಪಿಕೊಂಡಿತು. ಸುನೇತ್ರಾ ಪವಾರ್ ಅವರು ಪ್ರಸ್ತುತ ಉಪಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ ಮತ್ತು ಶಾಸಕಾಂಗ ಪಕ್ಷದ ನಾಯಕಿಯೂ ಆಗಿದ್ದಾರೆ" ಎಂದು ಪಕ್ಷದ ಮೂಲಗಳು ತಿಳಿಸಿದೆ.
ಇನ್ನು ಈ ಸಭೆಯಲ್ಲಿ ಪಕ್ಷವು ರಾಜ್ಯಸಭೆಗೆ ಪಾರ್ಥ್ ಪವಾರ್ ಅವರ ನಾಮನಿರ್ದೇಶನವನ್ನು ಅಂತಿಮಗೊಳಿಸಲಾಯಿತು. ಸುನೇತ್ರಾ ಪವಾರ್ ಅವರ ರಾಜೀನಾಮೆಯಿಂದ ತೆರವಾದ ರಾಜ್ಯಸಭೆ ಸದಸ್ಯ ಸ್ಥಾನ ಖಾಲಿಯಾಗಿತ್ತು. ಮಹಾರಾಷ್ಟ್ರದಲ್ಲಿ ಖಾಲಿ ಇರುವ ಏಳು ರಾಜ್ಯಸಭಾ ಸ್ಥಾನಗಳಿಗೆ ಮಾ.16ರಂದು ಚುನಾವಣೆ ನಡೆಯಲಿದೆ.