ನವದೆಹಲಿ, ಮಾ. 02 (DaijiworldNews/TA): ಇರಾನ್, ಅಮೇರಿಕಾ ಮತ್ತು ಇಸ್ರೇಲ್ ನಡುವೆ ನಡೆದ ದಾಳಿ-ಪ್ರತಿದಾಳಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆಯನ್ನು ತೀವ್ರಗೊಳಿಸಿರುವ ಹಿನ್ನೆಲೆಯಲ್ಲಿ, ಭಾರತದಲ್ಲಿ ಸಂಭವಿಸಬಹುದಾದ ಹಿಂಸಾಚಾರದ ಬಗ್ಗೆ ಕೇಂದ್ರ ಗೃಹಸಚಿವಾಲಯ ಎಲ್ಲಾ ರಾಜ್ಯಗಳಿಗೆ ಎಚ್ಚರಿಕೆ ನೀಡಿದೆ ಎಂದು ಉನ್ನತ ಅಧಿಕಾರಿಗಳು ತಿಳಿಸಿದ್ದಾರೆ.

ದೇಶದಲ್ಲಿ ಹಿಂಸಾಚಾರ ಸಂಭವಿಸಬಹುದೆಂದು ಹಾಗೂ ಅಶಾಂತಿಯನ್ನ ಪ್ರಚೋದಿಸುವ ಇರಾನ್ ಪರ ಮೂಲಭೂತ ಪ್ರಚಾರಕರನ್ನು ಗುರುತಿಸಿ ಮೇಲ್ವಿಚಾರಣೆ ನಡೆಸಲು ರಾಜ್ಯ ಸರ್ಕಾರಗಳು ಮತ್ತು ಭದ್ರತಾ ಸಂಸ್ಥೆಗಳು ಎಚ್ಚರಿಕೆಯಿಂದಿರಬೇಕು ಎಂದು ಸೂಚಿಸಿದೆ.
ಸುತ್ತೋಲೆ ಪ್ರದೇಶೀಯ ಬೆಳವಣಿಗೆಗಳು ಭಾರತೀಯ ನಾಗರಿಕರ ಸುರಕ್ಷತೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ, ಧಾರ್ಮಿಕ ಕೂಟಗಳಲ್ಲಿ ಉದ್ರೇಕಿತ ಭಾಷಣಗಳು ಮತ್ತು ಜಾಗತಿಕ ಘಟನೆಗಳನ್ನು ಸ್ಥಳೀಯ ಭಾವನೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳನ್ನೂ ಗಮನದಲ್ಲಿಟ್ಟುಕೊಂಡು ಕ್ರಮ ಕೈಗೊಳ್ಳಬೇಕೆಂದು ಎಂಹೆಚ್ಎ ಸೂಚಿಸಿದೆ.