ಬೆಂಗಳೂರು, ಏ. 16 (DaijiworldNews/TA): ಸಿಬಿಎಸ್ಇ 10ನೇ ತರಗತಿಯ ಫಲಿತಾಂಶಗಳು ಪ್ರಕಟವಾಗಿದ್ದು, ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ತೋರಿದ್ದಾರೆ. ಈ ಪೈಕಿ ಶ್ರೀ ಚೈತನ್ಯ ಟೆಕ್ನೋ ಸ್ಕೂಲ್ ವಿದ್ಯಾರ್ಥಿಗಳು ವಿಶೇಷ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ.

ವಿದ್ಯಾರ್ಥಿನಿ ಕಾಲ್ವಿ ಜಯೀತಾ ಅವರು 500ರಲ್ಲಿ 499 ಅಂಕಗಳನ್ನು ಪಡೆದು ಅತ್ಯುನ್ನತ ಸಾಧನೆ ಮಾಡಿದ್ದಾರೆ. ಅದೇ ರೀತಿಯಾಗಿ ಬಾಪತು ತರುಣ್ಯಾ ಅವರೂ ಕೂಡ 500ರಲ್ಲಿ 499 ಅಂಕಗಳನ್ನು ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.
ಒಟ್ಟು 60 ವಿದ್ಯಾರ್ಥಿಗಳು 490ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿರುವುದು ಈ ವರ್ಷದ ಫಲಿತಾಂಶದ ಪ್ರಮುಖ ಹೈಲೈಟ್ ಆಗಿದೆ. ವಿದ್ಯಾರ್ಥಿಗಳ ಈ ಸಾಧನೆಗೆ ಶ್ರೀ ಚೈತನ್ಯ ಟೆಕ್ನೋ ಸ್ಕೂಲ್ ಆಡಳಿತ ಮಂಡಳಿ ಸಂತೋಷ ವ್ಯಕ್ತಪಡಿಸಿದೆ. ಇದೇ ವೇಳೆ, ಉತ್ತಮ ಫಲಿತಾಂಶಕ್ಕಾಗಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಶ್ರಮವನ್ನು ಶಾಲಾ ಆಡಳಿತ ಮಂಡಳಿ ಶ್ಲಾಘಿಸಿದೆ.