ಕಾರವಾರ, ಮೇ. 24 (DaijiworldNews/AK): ಭಟ್ಕಳದ ತಟ್ಟೆ ಹಕ್ಕಲು ನದಿಯಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿ ದುರ್ಮರಣಕ್ಕೀಡಾದ 8 ಮಂದಿ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಸಮೀಪದ ತಟ್ಟೆಹಕ್ಕಲು ಕಡಲ ತೀರದಲ್ಲಿ ಕಪ್ಪೆಚಿಪ್ಪು ತರಲು ಹೋದವರ ಪೈಕಿ ಒಂದೇ ಕುಟುಂಬದ ಎಂಟು ಮಂದಿ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ ಸುದ್ದಿ ತಿಳಿದು ಸಂಕಟವಾಯಿತು. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.
ಈ ಬಗ್ಗೆ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಸಮೀಪದ ತಟ್ಟೆಹಕ್ಕಲು ಕಡಲ ತೀರದಲ್ಲಿ ಕಪ್ಪೆಚಿಪ್ಪು ತರಲು ಹೋದವರ ಪೈಕಿ ಒಂದೇ ಕುಟುಂಬದ ಎಂಟು ಮಂದಿ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ ಸುದ್ದಿ ತಿಳಿದು ಸಂಕಟವಾಯಿತು. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಇದೊಂದು ಅತ್ಯಂತ ದುರದೃಷ್ಟಕರ ಮತ್ತು ನೋವಿನ ಘಟನೆ. ದುರಂತದಲ್ಲಿ ಮಡಿದವರ ಕುಟುಂಬಕ್ಕೆ ಮಾನವೀಯ ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಇನ್ನೂ ಕೆಲವರು ಈ ದುರ್ಘಟನೆಯಲ್ಲಿ ಕಾಣೆಯಾಗಿರುವ ಮಾಹಿತಿಯಿದ್ದು, ಅವರಿಗಾಗಿ ತೀವ್ರ ಹುಡುಕಾಟ ನಡೆಸಲಾಗುತ್ತಿದೆ. ಕಾಣೆಯಾದವರು ಬದುಕಿಬಂದು ತಮ್ಮವರನ್ನು ಕೂಡಿಕೊಳ್ಳಲಿ ಎಂದು ನಾವೆಲ್ಲರೂ ದೇವರಲ್ಲಿ ಪ್ರಾರ್ಥಿಸೋಣ ಹೇಳಿದ್ದಾರೆ.