ಬೆಂಗಳೂರು, ಜೂ. 21 (DaijiworldNews/AA): ಕಾಂಗ್ರೆಸ್ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರಾಗಿ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಅವರು ಇಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ನಗರದ ಪ್ಯಾಲೆಸ್ ಗ್ರೌಂಡ್ನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಅವರು ಹರಿಪ್ರಸಾದ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಅಧಿಕಾರ ಹಸ್ತಾಂತರ ದಾಖಲೆಗಳಿಗೆ ಡಿಕೆ ಶಿವಕುಮಾರ್ ಹಾಗೂ ಬಿಕೆ ಹರಿಪ್ರಸಾದ್ ಇಬ್ಬರೂ ಸಹಿ ಹಾಕಿದರು.
ಪದಗ್ರಹಣ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಿಎಂ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ, ಡಿಕೆ ಸುರೇಶ್, ಸತೀಶ್ ಜಾರಕಿಹೊಳಿ, ಈಶ್ವರ್ ಖಂಡ್ರೆ ಮೊದಲಾದವರು ಉಪಸ್ಥಿತರಿದ್ದರು.