ಬೆಂಗಳೂರು, ಜೂ. 23 (DaijiworldNews/AA): ಸಂಪುಟದಲ್ಲಿ ಹೊಸಬರಿಗೆ ಅವಕಾಶ ನೀಡುವ ಆಲೋಚನೆ ಪ್ರಗತಿಯಲ್ಲಿದೆ ಎಂದು ಹೇಳಿರುವ ಸಿಎಂ ಡಿಕೆ ಶಿವಕುಮಾರ್ ಹೊಸಬರಿಗೆ ಮಣೆ ಹಾಕುವ ಕುರಿತು ಮಹತ್ವದ ಸುಳಿವು ನೀಡಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ನಾನು ಯಾರ ಪ್ರಗತಿ ಅಥವಾ ಅವಕಾಶವನ್ನು ತಡೆಯಲು ಬಯಸುವುದಿಲ್ಲ. ಎಲ್ಲರಿಗೂ ಸಮಾನ ಅವಕಾಶ ಸಿಗಬೇಕು ಎನ್ನುವುದೇ ನಮ್ಮ ಆಶಯ" ಎಂದು ತಿಳಿಸಿದ್ದಾರೆ.
"ಸಂಪುಟ ವಿಸ್ತರಣೆ ಅಥವಾ ಪುನಾರಚನೆಯ ಸಂಪೂರ್ಣ ಜವಾಬ್ದಾರಿಯನ್ನು ಪಕ್ಷದ ಹೈಕಮಾಂಡ್ ವಹಿಸಿಕೊಂಡಿದೆ. ಈಗಾಗಲೇ ನವದೆಹಲಿಯಲ್ಲಿ ಈ ಕುರಿತು ವರಿಷ್ಠರ ಮಟ್ಟದಲ್ಲಿ ಗಂಭೀರ ಚರ್ಚೆಗಳು ನಡೆಯುತ್ತಿವೆ. ಮುಂದಿನ ದಿನಗಳಲ್ಲಿ ಏನಾಗಲಿದೆ ಎಂಬುದನ್ನು ಕಾದು ನೋಡೋಣ" ಎಂದಿದ್ದಾರೆ.