ಬೆಂಗಳೂರು, ಸೆ.11(Daijiworld News/SS): ಬಿಜೆಪಿಯ ಒಕ್ಕಲಿಗ ನಾಯಕರು ಡಿ.ಕೆ. ಶಿವಕುಮಾರ್ ಬಂಧನವನ್ನು ರಾಜಕೀಯಗೊಳಿಸುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಾಜಿ ಸಚಿವ ಡಿಕೆ ಶಿವಕುಮಾರ್ ಬಂಧನ ವಿರೋಧಿಸಿ ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಭಟನಾ ರ್ಯಾಲಿ ಹಮ್ಮಿಕೊಳ್ಳಲಾಗಿದೆ. ಆದರೆ ಈ ಪ್ರತಿಭಟನೆಗೆ ಬಿಜೆಪಿ ಭಾರೀ ವಿರೋಧ ವ್ಯಕ್ತಪಡಿಸಿದೆ.
ಈ ಕುರಿತು ಮಾತನಾಡಿರುವ ಕಂದಾಯ ಸಚಿವ ಆರ್. ಅಶೋಕ್, ಮಾಜಿ ಸಚಿವ, ಕಾಂಗ್ರೆಸ್ ಸಚಿವ ಡಿಕೆ ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿರುವುದಕ್ಕೆ ಕಾಂಗ್ರೆಸ್ ಪಕ್ಷ ಜಾತಿಯ ಬಣ್ಣ ಬಳಿಯುವುದು ನಾಚಿಕೆಗೇಡಿನ ಸಂಗತಿ ಎಂದು ಟೀಕಿಸಿದ್ದಾರೆ.
ಡಿಸಿಎಂ ಡಾ. ಸಿಎನ್ ಅಶ್ವತ್ಥ ನಾರಾಯಣ ಕಾಂಗ್ರೆಸ್ ವಿರುದ್ದ ಕಿಡಿಕಾರಿದ್ದು, ಸಮಾಜದಲ್ಲಿ ಭ್ರಷ್ಟಾಚಾರ ತೀವ್ರವಾಗಿದ್ದು, ಜಾತಿ ಮೀರಿ ಭ್ರಷ್ಟಾಚಾರ ವಿರುದ್ದ ಹೋರಾಡಬೇಕಿದೆ. ಡಿ.ಕೆ.ಶಿವಕುಮಾರ್ ಬಂಧನ ವಿಚಾರದಲ್ಲಿ ಸಮಾಜದವರು ಶಾಂತಿಯುತವಾಗಿ ತಮ್ಮ ಭಾವನೆ ವ್ಯಕ್ತಪಡಿಸಲಿ. ಹಿಂದೆ ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ ಎಷ್ಟರ ಮಟ್ಟಿಗೆ ಭ್ರಷ್ಟಾಚಾರ ವಿರುದ್ದ ಆಡಳಿತ ನಡೆಸಿದ್ದರು..? ಈಗ ಜನರಿಗೆ ಹೋರಾಡುವಂತೆ ಕರೆ ಕೊಡುತ್ತಾರೆ ಎಂದು ದೂರಿದರು.