ಶ್ರೀನಗರ, ಸೆ.11(Daijiworld News/SS): ಭಾರತೀಯ ಸೇನೆ ಜಮ್ಮು ಮತ್ತು ಕಾಶ್ಮೀರದ ಸೊಪೋರ್'ನಲ್ಲಿ ಗುಂಡಿನ ದಾಳಿ ನಡೆಸಿದ್ದು, ಪಾಕಿಸ್ತಾನ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಪ್ರಮುಖ ಭಯೋತ್ಪಾದಕನನ್ನು ಬಂಧಿಸಿದೆ.
ಬಂಧನಕ್ಕೊಳಗಾಗಿರುವ ಉಗ್ರನನ್ನು ಆಸೀಫ್ ಶಪಿ ಅಲಾಮ್ ಎಂದು ಗುರುತಿಸಲಾಗಿದೆ.
ಆಸೀಫ್ ಶಪಿ ಅಲಾಮ್ ಪಾಕಿಸ್ತಾನದ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಪ್ರಮುಖ ಭಯೋತ್ಪಾದಕನೆಂದು ಹೇಳಲಾಗುತ್ತಿದೆ. ಗುಂಡಿನ ಚಕಮಕಿಯಲ್ಲಿ ಇಬ್ಬರು ಪೊಲೀಸರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉಗ್ರರು ಅಡಗಿ ಕುಳಿತಿರುವ ಮಾಹಿತಿ ತಿಳಿಯುತ್ತಿದ್ದಂತೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ಸೇನಾ ಪಡೆ ಜಂಟಿಯಾಗಿ ಕಾರ್ಯಾಚರಣೆ ನಡೆಸಲು ಆರಂಭಿಸಿತ್ತು. ಈ ವೇಳೆ ಉಗ್ರರು ಏಕಾಏಕಿ ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿವೆ.