ನವದೆಹಲಿ, ಸೆ 11 (Daijiworld News/MSP): ಪ್ರಧಾನಿ ನರೇಂದ್ರ ಮೋದಿಯವರ ಪ್ರಧಾನ ಕಾರ್ಯದರ್ಶಿಯಾಗಿ ಪ್ರಮೋದ್ ಕುಮಾರ್ ಮಿಶ್ರಾ ಅವರನ್ನು ನೇಮಕ ಮಾಡಲಾಗಿದೆ ಎಂದು ಪ್ರಧಾನಮಂತ್ರಿ ಸಚಿವಾಲಯದ ಅಧಿಕೃತ ಪ್ರಕಟಣೆ ತಿಳಿಸಿದೆ. ಅವರು ಬುಧವಾರ ತಮ್ಮ ಹೊಸ ಹುದ್ದೆಯನ್ನು ವಹಿಸಿಕೊಂಡಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಕೇಂದ್ರ ಸರಕಾರದಲ್ಲಿ ಕಳೆದ ಐದು ವರ್ಷಗಳ ಕಾಲ ಪ್ರಧಾನಿ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿಯಾಗಿ ಕಾರ್ಯನಿರ್ವಹಿಸಿದ್ದ ನೃಪೇಂದ್ರ ಮಿಶ್ರಾ ಅವರು ಕಳೆದ ತಿಂಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
1972ರ ತಂಡದ, ಗುಜರಾತ್ ಕೇಡರ್ನ ಐಎಎಸ್ ಅಧಿಕಾರಿಯಾಗಿದ ಪ್ರಮೋದ್ ಕುಮಾರ್ ಮಿಶ್ರಾ ಮೋದಿ ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗಿನಿಂದಲೂ ನಂಬಿಕಸ್ತ ಅಧಿಕಾರಿಯಾಗಿದ್ದರು. ಇವರು ಈ ಹಿಂದೆ ಪ್ರಧಾನ ಮಂತ್ರಿಯ ಹೆಚ್ಚುವರಿ ಪ್ರಿನ್ಸಿಪಲ್ ಸೆಕ್ರೆಟರಿಯಾಗಿ ಕಾರ್ಯನಿರ್ವಹಿಸಿದ್ದರು. ಅಲ್ಲದೇ ಆ್ಯಗ್ರಿಕಲ್ಚರ್ ಅಂಡ್ ಕಾರ್ಪೋರೇಶನ್ ಸೆಕ್ರೆಟರಿ, ರಾಜ್ಯ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸಿದ್ದರು.