ಬೆಂಗಳೂರು, ಸೆ 11 (DaijiworldNews/SM): ಭಾರೀ ದಂಡ ಪಾವತಿಸಿ ಹೈರಾಣಾಗಿದ್ದ ವಾಹನ ಸವಾರರೇ ಇಲ್ಲಿದೆ ಗುಡ್ ನ್ಯೂಸ್. ಇನ್ನು ಮುಂದೆ ನೀವು ಒಂದಿಷ್ಟು ನಿರಾಳರಾಗಲಿದ್ದೀರಿ. ಭಾರೀ ಪ್ರಮಾಣದ ಮೊತ್ತಕ್ಕೆ ಬ್ರೇಕ್ ಹಾಕಲು ರಾಜ್ಯ ಸರಕಾರ ಮುಂದಾಗಿದೆ ಎಂದು ಹೇಳಲಾಗಿದೆ.
ಕೇಂದ್ರ ಸರ್ಕಾರ ಮೋಟಾರು ವಾಹನ ತಿದ್ದುಪಡಿ ಕಾಯ್ದೆ ಜಾರಿಗೊಳಿಸಿದ ನಂತರ ಸಂಚಾರ ನಿಯಮ ಉಲ್ಲಂಘನೆಗಾಗಿ ದುಬಾರಿ ಮೊತ್ತದ ದಂಡ ವಿಧಿಸಲಾಗುತ್ತಿದೆ. ಇದರಿಂದಾಗಿ ವಾಹನ ಸವಾರರು ಹೈರಾಣಾಗಿದ್ದು, ತೀವ್ರ ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ. ಜನಸಾಮಾನ್ಯರಿಗೆ ದುಬಾರಿ ದಂಡದಿಂದ ತೊಂದರೆಯಾಗುತ್ತಿದೆ. ಕೂಡಲೇ ದಂಡ ಇಳಿಸುವಂತೆ ಸಿಎಂ ಯಡಿಯೂರಪ್ಪ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಗುಜರಾತ್ ಸರ್ಕಾರದ ಆದೇಶವನ್ನು ಪರಿಶೀಲಿಸಿ ರಾಜ್ಯದಲ್ಲಿಯೂ ದಂಡ ಇಳಿಕೆ ಮಾಡಬೇಕೆಂದು ಸಿಎಂ ಬಿಎಸ್ ವೈ ಸೂಚನೆ ನೀಡಿದ್ದಾರೆ. ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಾರಿಗೆ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಸಿಎಂ ದಂಡದ ಮೊತ್ತ ಇಳಿಸಲು ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.