ಕೋಲ್ಕತ್ತಾ, ಆ. 16 (DaijiworldNews/TA): ಪಶ್ಚಿಮ ಬಂಗಾಳ ವಿಧಾನಸಭೆಯ ಮಾಜಿ ಉಪಸಭಾಪತಿ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕ ಆಶಿಶ್ ಬ್ಯಾನರ್ಜಿ ಅವರು ಭಾನುವಾರ ಬೆಳಗ್ಗೆ ಬಿರ್ಭೂಮ್ ಜಿಲ್ಲೆಯ ರಾಂಪುರ್ಹಾಟ್ನಲ್ಲಿರುವ ಟಿಎಂಸಿ ಕಚೇರಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಿಎಂಸಿ ಕಚೇರಿ ಆಶಿಶ್ ಬ್ಯಾನರ್ಜಿ ಅವರ ರಾಂಪುರ್ಹಾಟ್ನ ನಿವಾಸದ ಸಮೀಪದಲ್ಲೇ ಇದೆ. ಬೆಳಗ್ಗೆ ಕಚೇರಿಯಲ್ಲಿ ಅವರು ಶವವಾಗಿ ಪತ್ತೆಯಾಗಿದ್ದು, ಘಟನೆ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇದೇ ವೇಳೆ, ಆಶಿಶ್ ಬ್ಯಾನರ್ಜಿ ಅವರ ನಿವಾಸದಲ್ಲಿ ಡೆತ್ನೋಟ್ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಆದರೆ ಡೆತ್ನೋಟ್ನಲ್ಲಿರುವ ವಿಷಯಗಳ ಕುರಿತು ಪೊಲೀಸರು ಯಾವುದೇ ಹೆಚ್ಚಿನ ಮಾಹಿತಿಯನ್ನು ಬಹಿರಂಗಪಡಿಸಿಲ್ಲ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿ ಬಂದ ಬಳಿಕ ಸಾವಿನ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.