ರಾಂಚಿ, ಸೆ 12 (DaijiworldNews/SM): ರೈತರ ಹಿತ ಕಾಯುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಹೊಸ ಹೊಸ ಯೋಜನೆಗಳನ್ನು ಕೈಗೊಳ್ಳುತ್ತಿದೆ. ಇದೀಗ ಮಹತ್ವಾಕಾಂಕ್ಷೆ ಯೋಜನೆಯಾದ “ಪ್ರಧಾನಮಂತ್ರಿ ಕಿಸಾನ್ ಮಾನ್ ಧನ್” ಯೋಜನೆಗೆ ಚಾಲನೆ ನೀಡಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಯೋಜನೆಗೆ ಚಾಲನೆ ನೀಡಿದ್ದಾರೆ.
“ಪ್ರಧಾನಮಂತ್ರಿ ಕಿಸಾನ್ ಮಾನ್ ಧನ್” ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಜಾರ್ಖಂಡ್ ನಲ್ಲಿ ಚಾಲನೆ ನೀಡಿದ್ದಾರೆ. ಈ ಯೋಜನೆ ಇಂದಿನಿಂದ ದೇಶಾದ್ಯಂತ ಜಾರಿಗೆ ಬಂದಿದೆ.
ಈ ಯೋಜನೆಯಲ್ಲಿ 18ರಿಂದ 40 ವರ್ಷ ವಯಸ್ಸಿನ ರೈತರು ತೊಡಗಿಸಿಕೊಳ್ಳಬಹುದಾಗಿದೆ. ರೈತರು ವಾರ್ಷಿಕ ಕಂತುಗಳಲ್ಲಿ ಹಣ ಕಟ್ಟಬೇಕಾಗಿದೆ. ಕಂತುಗಳನ್ನು ತಪ್ಪದೇ ಕಟ್ಟಿದ್ದಲ್ಲಿ, ಪಿಂಚಣಿ ಪಡೆಯಲು ಅರ್ಹರಾಗಿರುತ್ತಾರೆ. ಯೋಜನೆಯ ಮೂಲಕ ಫಲಾನುಭವಿಗಳಿಗೆ 60 ವರ್ಷಗಳಾಗುತ್ತಿದ್ದಂತೆ ಮಾಸಿಕ 3000 ರೂಪಾಯಿ ಪಿಂಚಣಿ ಪಡೆಯಬಹುದಾಗಿದೆ.