ನವದೆಹಲಿ, ಸೆ 13 (Daijiworld News/RD): ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಸಮಸ್ಯೆಯನ್ನು ನಿಯಂತ್ರಿಲು ಮುಂದಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಮ-ಬೆಸ ಸಂಚಾರ ವ್ಯವಸ್ಥೆಗೆ ಮರುಚಾಲನೆ ನೀಡಿದ್ದಾರೆ.
ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದಲ್ಲಿ ವಾಯುಮಾಲಿನ್ಯ ದಿನೇ ದಿನೇ ಹೆಚ್ಚಾಗುತ್ತಿದ್ದು, ಈ ಸಮಸ್ಯೆ ನಿವಾರಣೆಗೆ ಮತ್ತೆ ಈ ಯೋಜನೆಗೆ ಚಾಲನೆ ನೀಡಲಾಗುತ್ತಿದೆ ಎಂದರು. ಈ ವ್ಯವಸ್ಥೆ ನವೆಂಬರ್ 4ರಿಂದ ಆರಂಭಗೊಳ್ಳಲಿದೆ ಎಂದು ಹೇಳಿದ್ದಾರೆ.
ಇನ್ನು ಚಳಿಗಾಲದಲ್ಲಿ ದೆಹಲಿಯ ಜನರು ವಾಯುಮಾಲಿನ್ಯದಿಂದ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಾರೆ. ಹೀಗಾಗಿ ಮುಂಜಾಗೃತ ಕ್ರಮವಾಗಿ ಅಲ್ಪಾವಧಿಯ ಮಾಪನದ ಫೇಸ್ ಮಾಸ್ಕ್ ಬಳಸುವಂತೆ ಪರಿಸರ ತಜ್ಞರು ಶಿಫಾರಸ್ಸು ಮಾಡಿದ್ದರು.
2016ರಲ್ಲಿ ದೆಹಲಿಯಲ್ಲಿ ಮೊದಲ ಬಾರಿಗೆ ಈ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. ಸಮಸಂಖ್ಯೆ ಹೊಂದಿದಂತಹ ವಾಹನಗಳು ಪರ್ಯಾಯ ದಿನ ಸಂಚಾರ ಮಾಡುವ ಯೋಜನೆ ಇದಾಗಿದ್ದು, ಆದರೆ ಈ ಯೋಜನೆಗೆ ಭಾರೀ ವಿರೋಧ ವ್ಯಕ್ತವಾಗಿತ್ತು, ಆದ್ದರಿಂದ ಸ್ಧಗಿತಗೊಂಡಿತ್ತು. ಆದರೆ ಇದೀಗ ಮತ್ತೆ ಮೂರನೇ ಬಾರಿಗೆ ಜಾರಿಗೆ ತರಲಾಗುತ್ತಿದೆ.