ನವದೆಹಲಿ, ಸೆ. 06 (DaijiworldNews/AA): ಆರು ಅಂತಸ್ತಿನ ಕಟ್ಟಡ ಕುಸಿದ ಪರಿಣಾಮ ಓರ್ವ ಸಾವನ್ನಪ್ಪಿರುವ ಘಟನೆ ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಸಂಭವಿಸಿದೆ. ಕಟ್ಟಡದ ಅವಶೇಷಗಳಡಿ ಇನ್ನೂ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಅವಶೇಷಗಳ ಅಡಿಯಲ್ಲಿ ಸಿಲುಕಿರುವವರನ್ನು ಹುಡುಕಲು ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇದುವರೆಗೆ ಕಟ್ಟಡದಿಂದ 6 ಜನರನ್ನು ರಕ್ಷಿಸಲಾಗಿದ್ದು, ಕಾರ್ಯಾಚರಣೆ ಮುಂದುವರೆದಿದೆ. 75 ಹಾಸಿಗೆಗಳ ಪೇಯಿಂಗ್ ಗೆಸ್ಟ್ ವಸತಿ ಸೌಕರ್ಯವಾಗಿ ಕಾರ್ಯನಿರ್ವಹಿಸುತ್ತಿದ್ದ ಕಟ್ಟಡವು ಮಧ್ಯಾಹ್ನ 1:30 ರ ಸುಮಾರಿಗೆ ಕುಸಿದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕುಸಿತದ ಸಮಯದಲ್ಲಿ ಕನಿಷ್ಠ 50 ವಿದ್ಯಾರ್ಥಿಗಳು ಕಟ್ಟಡದೊಳಗೆ ಇದ್ದಾರೆ. ಭಾನುವಾರವಾದ ಕಾರಣ ಹೆಚ್ಚಿನವರು 'ಮನೆಯಲ್ಲಿ' ಇದ್ದರು ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಹಾಯಕ್ಕಾಗಿ ಕೂಗು ಕೇಳಿಬಂದಿದೆ ಎಂದು ಸ್ಥಳದಲ್ಲಿದ್ದ ವಿದ್ಯಾರ್ಥಿಯೊಬ್ಬರು ಹೇಳಿದ್ದಾರೆ.