ಹೈದರಾಬಾದ್, ಸೆ.22 (DaijiworldNews/TA): ಹೈದರಾಬಾದ್ನಲ್ಲಿ 35 ವರ್ಷದ ಪೊಲೀಸ್ ಕಾನ್ಸ್ಟೇಬಲ್ವೊಬ್ಬರು ಸೋಮವಾರ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ.

ಮಲ್ಕಜ್ಗಿರಿ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಶಸ್ತ್ರ ಮೀಸಲು ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು ಮನೆಯಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಬೆಳಗಿನ ಜಾವ ಸುಮಾರು 1.30ರ ವೇಳೆಗೆ ಅವರ ಸಂಬಂಧಿಯೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ತೆರಳಿ ಕಾನ್ಸ್ಟೇಬಲ್ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ಆತ್ಮಹತ್ಯೆಗೂ ಮುನ್ನ ಕಾನ್ಸ್ಟೆಬಲ್ ಮಹಿಳೆಯೊಬ್ಬರಿಗೆ ಇನ್ಸ್ಟಂಟ್ ಮೆಸೇಜಿಂಗ್ ಆ್ಯಪ್ ಮೂಲಕ ವೀಡಿಯೊ ಕರೆ ಮಾಡಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆಯ ಆಧಾರದ ಮೇಲೆ, ಮದುವೆಗೆ ಸಂಬಂಧಿಸಿದ ಕೆಲವು ವೈಯಕ್ತಿಕ ಸಮಸ್ಯೆಗಳಿಂದ ಅವರು ನೊಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ, ಸಾವಿಗೆ ನಿಖರವಾದ ಕಾರಣ ಮತ್ತು ಘಟನೆಯ ಹಿಂದಿನ ಸಂಪೂರ್ಣ ಸಂದರ್ಭ ಇನ್ನೂ ಸ್ಪಷ್ಟವಾಗಿಲ್ಲ. ಘಟನೆ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದು, ತನಿಖೆ ಪೂರ್ಣಗೊಂಡ ಬಳಿಕ ಸಾವಿಗೆ ಕಾರಣವಾದ ನಿಖರ ಅಂಶಗಳು ತಿಳಿದುಬರಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂಬಂಧ ಮಲಕ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.