ನವದೆಹಲಿ, ಸೆ.24 (DaijiworldNews/AK): ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ 48 ಗಂಟೆಗಳ ಗಡುವು ನೀಡಿದೆ.

ನಿಗದಿತ ಅವಧಿಯಲ್ಲಿ ರಾಜೀನಾಮೆ ನೀಡದಿದ್ದರೆ ದೇಶಾದ್ಯಂತ ಪ್ರತಿಭಟನೆ ನಡೆಸುವುದಾಗಿ ಪಕ್ಷದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಎಚ್ಚರಿಕೆ ನೀಡಿದ್ದಾರೆ.
ದೆಹಲಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ದೀಪ್ಕೆ, 48 ಗಂಟೆಗಳ ಒಳಗೆ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡದಿದ್ದರೆ ಸಿಜೆಪಿ ದೇಶಾದ್ಯಂತ ಹೋರಾಟ ನಡೆಸಲಿದೆ. ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ ನಾವು ಹಿಂದೆ ಸರಿಯೋದಿಲ್ಲ ಎಂದು ಎಚ್ಚರಿಸಿದ್ದಾರೆ.