ರಾಮನಗರ, ಸೆ.27 (DaijiworldNews/AA): ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ಹಣ ಖರ್ಚಾಗುತ್ತಿರುವುದು ನಿಜ ಗ್ಯಾರಂಟಿ ಯೋಜನೆಗಳು ಸರ್ಕಾರದ ಕಮಿಟ್ಮೆಂಟ್, ಇವು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.

ಗ್ಯಾರಂಟಿ ಯೋಜನೆಗಳಿಗೆ ಸಿಕ್ಕು ಒದ್ದಾಡುತ್ತಿದ್ದೇವೆ ಎಂದು ಸಚಿವ ಹೆಚ್.ಸಿ ಬಾಲಕೃಷ್ಣ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, "ಚುನಾವಣೆಗೂ ಮುನ್ನ ಜನರಿಗೆ ನೀಡಿದ ಭರವಸೆಯಂತೆ ಗ್ಯಾರಂಟಿ ಕಮಿಟ್ಮೆಂಟ್ ಪೂರೈಸುವುದು ಸರ್ಕಾರದ ಕರ್ತವ್ಯ. ಗ್ಯಾರಂಟಿಗಳ ಜೊತೆಗೆ ಜನರಿಗೆ ಹೊಸ ಹೊಸ ಯೋಜನೆಗಳನ್ನು ತಲುಪಿಸಲಾಗುತ್ತಿದೆ" ಎಂದು ಹೇಳಿದರು.
"ರಾಜ್ಯದಲ್ಲಿ ಸರ್ಕಾರಿ ಬೊಕ್ಕಸ ಖಾಲಿಯಾಗಿದೆ ಎಂಬ ವಿಪಕ್ಷಗಳ ಆರೋಪವನ್ನು ತಳ್ಳಿಹಾಕಿದ ಅವರು, ಯಾವುದೇ ಅಭಿವೃದ್ಧಿ ಯೋಜನೆಗಳನ್ನು ಸರ್ಕಾರ ನಿಲ್ಲಿಸಿಲ್ಲ. ಬೊಕ್ಕಸ ಖಾಲಿಯಾಗಿದ್ದರೆ ಕರಾವಳಿ ಅಭಿವೃದ್ಧಿಗೆ 35,000 ಕೋಟಿ ರೂ. ಅನುದಾನ ನೀಡಲು ಹೇಗೆ ಸಾಧ್ಯವಾಗುತ್ತಿತ್ತು?" ಎಂದು ಕೇಳಿದರು.