ಬೆಂಗಳೂರು, ಸೆ.27 (DaijiworldNews/AA): ಎಸ್ಐಆರ್ ವಿಚಾರದಲ್ಲಿ ಚುನಾವಣಾ ಆಯೋಗದ ಪಾತ್ರ ಕುರಿತು ಕಾಂಗ್ರೆಸ್ ವೃಥಾ ಆರೋಪ ಮಾಡುತ್ತಿದೆ ಎಂದು ವಿರೋಧಪಕ್ಷದ ನಾಯಕ ಆರ್.ಅಶೋಕ ಆರೋಪಿಸಿದ್ದಾರೆ.

ಈ ವಿಚಾರವಾಗಿ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಕಾಂಗ್ರೆಸ್ ನಾಯಕರು ಮುಂಬರುವ ಚುನಾವಣೆಯಲ್ಲಿ ಸೋಲುವ ಹತಾಶೆಯಿಂದ ಚುನಾವಣಾ ಆಯೋಗ ಮಾತ್ರವಲ್ಲದೇ ಸುಪ್ರೀಂಕೋರ್ಟ್, ಸಿಬಿಐ, ಇಡಿ ಸೇರಿದಂತೆ ಎಲ್ಲ ಸಾಂವಿಧಾನಿಕ ಸಂಸ್ಥೆಗಳ ಮೇಲೆಯೂ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ" ಎಂದರು.
"ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಂಖ್ಯೆಯನ್ನು ಕಡಿಮೆ ಮಾಡಲು ಸರ್ಕಾರ ಪ್ರಯತ್ನ ನಡೆಸಿದೆ. ರಾಜ್ಯ ಆರ್ಥಿಕ ಇಲಾಖೆ ದಿವಾಳಿಯಾಗಿದೆ. ಕಸ್ತೂರಿ ರಂಗನ್ ವರದಿ ವಿಚಾರವಾಗಿ ಕೇಂದ್ರ ಸಚಿವರನ್ನು ಭೇಟಿ ಮಾಡಲು ಸಿದ್ಧನಿದ್ದೇನೆ" ಎಂದು ತಿಳಿಸಿದರು.