ಲಕ್ನೋ, ಅ.16 (DaijiworldNews/AA): ರಾಹುಲ್ ಗಾಂಧಿ ಮತ್ತು ಅವರ ಸಹಚರರು ಪ್ರಜಾಪ್ರಭುತ್ವವೆಂದರೆ ಅರಾಜಕತೆ ಸೃಷ್ಟಿಸಲು, ಸಾಂವಿಧಾನಿಕ ಸಂಸ್ಥೆಗಳ ವಿಶ್ವಾಸಾರ್ಹತೆಯನ್ನ ಕುಂದಿಸಲು ಅಥವಾ ಭಾರತದ ಅಭಿವೃದ್ಧಿಯ ಪಯಣಕ್ಕೆ ಅಡ್ಡಿಪಡಿಸಲು ಸಿಕ್ಕಿರುವ ಲೈಸೆನ್ಸ್ ಅಲ್ಲ ಅನ್ನೋದನ್ನ ಅರ್ಥಮಾಡಿಕೊಳ್ಳಬೇಕು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ.

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ ಸಚಿವ ರಾಜನಾಥ್ ಸಿಂಗ್ ಅವರು ಶುಕ್ರವಾರ
"2024ರ ಜುಲೈನಲ್ಲಿ ಬಾಂಗ್ಲಾದೇಶದಲ್ಲಿ ನಡೆದ ಜನಾಂದೋಲನದ ಮಾದರಿಲ್ಲೇ ಭಾರತದಲ್ಲೂ ಆಡಳಿತ ಬದಲಾವಣೆಗೆ ವಿಪಕ್ಷಗಳ ಮೈತ್ರಿಕೂಟ ಪ್ರಯತ್ನಿಸುತ್ತಿವೆ. ಲಕ್ನೋದಲ್ಲಿ ಉತ್ತರ ಪ್ರದೇಶದ ಸಿಎಂ ಬ್ರಜೇಶ್ ಪಾಠಕ್ ಅವರೊಂದಿಗೆ ನಡೆಸಿದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಅಖಿಲ ಭಾರತ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷೆ ನೇಹಾ ಬೋರಾ ಬಾಂಗ್ಲಾದೇಶದ ಪ್ರತಿಭಟನೆಗಳಿಂದ ಸ್ಫೂರ್ತಿ ಪಡೆದಿದ್ದಾರೆ" ಎಂದು ಹೇಳಿದರು.
"ಈ ಹೇಳಿಕೆಯು ವಿಪಕ್ಷಗಳ ಮೈತ್ರಿಕೂಟವು ಪ್ರಜಾಸತ್ತಾತ್ಮಕ ಸಂಸ್ಥೆಗಳನ್ನ ದುರ್ಬಲಗೊಳಿಸಿ ದೇಶದಲ್ಲಿ ಅಶಾಂತಿ ಸೃಷ್ಟಿಸಲು ಬಯಸುತ್ತಿದೆ ಎಂಬುದನ್ನು ಸ್ಪಷ್ಟಪಡಿಸುತ್ತದೆ. ಕಾಂಗ್ರೆಸ್ ಮತ್ತು ಅದರ ಮೈತ್ರಿಪಕ್ಷಗಳು ಭಾರತದ ಯುವಜನರ ಶಕ್ತಿಯನ್ನು ಅರಾಜಕತೆ ಹರಡಲು ಬಳಸಿಕೊಳ್ಳಲು ಪ್ರಯತ್ನಿಸುತ್ತಿವೆ. ಈ ಪ್ರಯತ್ನವನ್ನ ನೇರವಾಗಿಯೂ ಪರೋಕ್ಷವಾಗಿಯೂ ನಡೆಸಲಾಗುತ್ತಿದೆ" ಎಂದು ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟದ ವಿರುದ್ಧ ಕಿಡಿಕಾರಿದರು.
"ರಾಹುಲ್ ಗಾಂಧಿ ಮತ್ತು ಅವರ ಸಹಚರರು ಪ್ರಜಾಪ್ರಭುತ್ವವೆಂದರೆ ಅರಾಜಕತೆ ಸೃಷ್ಟಿಸಲು, ಸಾಂವಿಧಾನಿಕ ಸಂಸ್ಥೆಗಳ ವಿಶ್ವಾಸಾರ್ಹತೆಯನ್ನು ಕುಂದಿಸಲು ಅಥವಾ ಭಾರತದ ಅಭಿವೃದ್ಧಿಯ ಪಯಣಕ್ಕೆ ಅಡ್ಡಿಪಡಿಸಲು ಸಿಕ್ಕಿರುವ ಲೈಸೆನ್ಸ್ ಅಲ್ಲ ಎಂಬುದನ್ನು ಅರ್ಥಮಾಡಿಕೊಳ್ಳಬೇಕು. ನಿನ್ನೆ ಸುಪ್ರೀಂ ಕೋರ್ಟ್ ನೀಡಿದ ಅಭಿಪ್ರಾಯ ಕೂಡ ಇದನ್ನೇ ಸೂಚಿಸುತ್ತೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಅತ್ಯಗತ್ಯ. ರಾಜಕೀಯ ಸ್ವಾರ್ಥಕ್ಕಾಗಿ ಭಾರತದ ಪ್ರಜಾಸತ್ತಾತ್ಮಕ ಸಂಸ್ಥೆಗಳನ್ನ ಬಲಿಸಲು ಸಾಧ್ಯವಿಲ್ಲ. ಈ ವಾಸ್ತವವನ್ನ ಅರ್ಥಮಾಡಿಕೊಳ್ಳಬೇಕು" ಎಂದರು.