ನವದೆಹಲಿ, ನ.25 (DaijiworldNews/AA): 2020ರ ದೆಹಲಿ ಗಲಭೆ ಪ್ರಕರಣದ ಆರೋಪಿಗಳಾದ ಉಮರ್ ಖಾಲೀದ್, ಶಾರ್ಜೀಲ್ ಇಮಾಮ್ಗೆ ಮಧ್ಯಂತರ ಜಾಮೀನು ನೀಡಲು ಸುಪ್ರೀಂಕೋರ್ಟ್ ಬುಧವಾರ ನಿರಾಕರಿಸಿದೆ.

ಜಾಮೀನು ಅರ್ಜಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ವಿ. ಮೋಹನ ಅವರನ್ನೊಳಗೊಂಡ ಪೀಠ ನ. 25 ರಂದು ನಡೆಸಿತು. ಅರ್ಜಿ ವಿಚಾರಣೆ ನಡೆಸಿದ ಪೀಠ ಮಧ್ಯಂತರ ಜಾಮೀನು ನೀಡಲು ನಿರಾಕರಿಸಿದ್ದು, ಈ ಕುರಿತು ಪ್ರತಿಕ್ರಿಯೆ ನೀಡುವಂತೆ ದೆಹಲಿ ಪೊಲೀಸರಿಗೆ ನೋಟಿಸ್ ಜಾರಿಗೊಳಿಸಿದೆ.
ಇತ್ತೀಚೆಗೆ ದೆಹಲಿ ಹೈಕೋರ್ಟ್ ಇಬ್ಬರಿಗೂ ಜಾಮೀನು ನೀಡಲು ನಿರಾಕರಿಸಿತ್ತು. ಹೀಗಾಗಿ ದೆಹಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಇಬ್ಬರೂ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ವಾದ ವಿವಾದ ಆಲಿಸಿದ ಪೀಠ, ಮಧ್ಯಂತರ ಜಾಮೀನು ಮನವಿಯನ್ನು ಪರಿಗಣಿಸುವ ಮೊದಲು ದೆಹಲಿ ಪೊಲೀಸರ ಪ್ರತಿಕ್ರಿಯೆಯನ್ನು ಆಲಿಸುವುದಾಗಿ ಹೇಳಿದೆ.