ನವದೆಹಲಿ, ಆ 16 (DaijiworldNews/PY): ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಿರಿಯ ಬಿಜೆಯಿ ನಾಯಕರು ಇಂದು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಎರಡನೇ ವರ್ಷದ ಪುಣ್ಯಸ್ಮರಣೆಯ ಹಿನ್ನೆಲೆ ಸ್ಮೃತಿ ಸ್ಥಲ್ ಸದೇವ್ ಅಟಲ್ಗೆ ತೆರಳಿ ಗೌರವ ಸಲ್ಲಿಸಿದ್ದಾರೆ.
ವಾಜಪೇಯಿ ಅವರು 1924 ರ ಡಿಸೆಂಬರ್ 25 ರಂದು ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ಜನಿಸಿದ್ದರು. ಇವರು ಭಾರತೀಯ ಜನತಾ ಪಕ್ಷದಿಂದ ಪ್ರಧಾನ ಮಂತ್ರಿಯಾದ ಮೊದಲ ವ್ಯಕ್ತಿ. ವಾಜಪೇಯಿ ಅವರು ಮೂರು ಬಾರಿ ಪ್ರಧಾನ ಮಂತ್ರಿಯಾಗಿ 1996 ರಲ್ಲಿ, 1998 ರಿಂದ 1999 ರವರೆಗೆ ಹಾಗೂ ನಂತರ 1999 ಮತ್ತು 2004ರವೆಗೆ ಪೂರ್ಣ ಐದು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ.
ವಾಜಪೇಯಿ ಅವರು ಆಗಸ್ಟ್ 16, 2018ರಂದು 93ನೇ ವಯಸ್ಸಿನಲ್ಲಿ ನಿಧನರಾಗಿದ್ದರು.
ಈ ಬಗ್ಗೆ ಟ್ವೀಟ್ ಕೂಡಾ ಮಾಡಿರುವ ಪ್ರಧಾನಿ ಮೋದಿ ಅವರು, ಅಟಲ್ ಜಿ ಅವರ ಪುಣ್ಯ ತಿಥಿಯಂದು ಅವರಿಗೆ. ಗೌರವ ಸಲ್ಲಿಸುತ್ತೇನೆ. ನಮ್ಮ ರಾಷ್ಟ್ರದ ಪ್ರಗತಿಯತ್ತ ಅವರು ಮಾಡಿರುವ ಅತ್ಯುತ್ತಮ ಸೇವೆ ಮತ್ತು ಪ್ರಯತ್ನಗಳನ್ನು ಭಾರತ ಯಾವಾಗಲೂ ನೆನಪಿಸಿಕೊಳ್ಳುತ್ತದೆ ಎಂದು ತಿಳಿಸಿದ್ದಾರೆ.
ಗೃಹ ಸಚಿವ ಅಮಿತ್ ಶಾ ಕೂಡಾ ಟ್ವೀಟ್ ಮಾಡಿದ್ದು, ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಜಿ ಅವರು ದೇಶಭಕ್ತಿ ಮತ್ತು ಭಾರತೀಯ ಸಂಸ್ಕೃತಿಯ ಧ್ವನಿಯಾಗಿದ್ದರು. ಅವರು ಉತ್ತಮ ರಾಜಕಾರಣಿ ಮತ್ತು ನುರಿತ ಸಂಘಟಕರಾಗಿದ್ದರು. ಅವರು ಬಿಜೆಪಿಯ ಅಡಿಪಾಯ ಮತ್ತು ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವಹಿಸಿದರು ಮತ್ತು ಲಕ್ಷಾಂತರ ಕಾರ್ಮಿಕರಿಗೆ ದೇಶದ ಸೇವೆ ಮಾಡಲು ಪ್ರೇರಣೆ ನೀಡಿದರು ಎಂದಿದ್ದಾರೆ.