ಲಕ್ನೋ, ಆ 16 (DaijiworldNews/PY): 13 ವರ್ಷದ ಬಾಲಕಿಯನ್ನು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಮಾಡಿ, ಆಕೆಯ ಕಣ್ಣು ಕಿತ್ತು, ನಾಲಿಗೆ ಕತ್ತರಿಸಿ ಹತ್ಯೆ ಮಾಡಿದ ಘಟನೆ ಉತ್ತರಪ್ರದೇಶದ ಲಖೀಂಪುರ ಜಿಲ್ಲೆಯಲ್ಲಿ ನಡೆದಿದೆ.
ಬಾಲಕಿಯ ಮೃತದೇಹವು ಜಿಲ್ಲೆಯ ಹೊರವಲಯದಲ್ಲಿರುವ ಕಬ್ಬಿನ ಗದ್ದೆಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶುಕ್ರವಾರ ಮಧ್ಯಾಹ್ನ ಬಾಲಕಿ ನಾಪತ್ತೆಯಾಗಿದ್ದಳು. ಆಕೆಯ ಪೋಷಕರು ಆಕೆಯನ್ನು ಎಲ್ಲಾ ಕಡೆ ಹುಡುಕಾಡಿದ್ದಾರೆ. ಆದರೆ, ಶನಿವಾರದಂದು ಆಕೆಯ ಮೃತದೇಹ ಊರ ಹೊರವಲಯದ ಕಬ್ಬಿನ ಗದ್ದೆಯಲ್ಲಿ ಪತ್ತೆಯಾಗಿತ್ತು. ಆಕೆಯ ಕಣ್ಣು, ನಾಲಿಗೆ ಕತ್ತರಿಸಿ ಆಕೆಯ ದುಪ್ಪಟ್ಟದಿಂದಲೇ ಹತ್ಯೆಮಾಡಲಾಗಿತ್ತು ಎಂದು ಪೋಷಕರು ದೂರಿನಲ್ಲಿ ತಿಳಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.
ಬಾಲಕಿಯ ಮರಣೋತ್ತರ ಪರೀಕ್ಷೆ ಬಳಿಕ ಅತ್ಯಾಚಾರಗೈದಿದ್ದಾರೆ ಎಂದು ದೃಢಪಟ್ಟಿದೆ. ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.