ನವದೆಹಲಿ,ಜ.11 (DaijiworldNews/HR): ದೆಹಲಿ, ಮಹಾರಾಷ್ಟ್ರ ಸೇರಿದಂತೆ ಒಟ್ಟು ಒಂಭತ್ತು ರಾಜ್ಯಗಳಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದ್ದು, ದೇಶದಲ್ಲಿ ಪ್ರಾಣಿಗಳಿಗೆ ನೀಡಲು ಅಗತ್ಯವಿರುವ ಲಸಿಕೆ ಕುರಿತು ಮಾಹಿತಿ ಪಡೆಯುವ ನಿಟ್ಟಿನಲ್ಲಿ ಕೃಷಿ ಇಲಾಖೆಯ ಸಂಸದೀಯ ಸ್ಥಾಯಿ ಸಮಿತಿ, ಪಶುಸಂಗೋಪನಾ ಸಚಿವಾಲಯದ ಹಿರಿಯ ಅಧಿಕಾರಿಗಳ ಸಭೆ ಇಂದು ನಡೆಯಲಿದೆ ಎಂದು ತಿಳಿದು ಬಂದಿದೆ.

ಹಕ್ಕಿ ಜ್ವರ ಕಾಣಿಸಿಕೊಂಡಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲು ಈಗಾಗಲೇ ಎಲ್ಲಾ ರಾಜ್ಯಗಳಿಗೂ ಕೇಂದ್ರ ಸರ್ಕಾರ ಸೂಚನೆ ನೀಡಿದ್ದು,ಇಂದು ಮಧ್ಯಾಹ್ನ 3 ಗಂಟೆಗೆ ಸಭೆ ಕರೆಯಲಾಗಿದೆ ಎಂದು ವರದಿ ತಿಳಿಸಿದೆ.
ಇನ್ನು ಸೋಂಕಿತ ಪ್ರದೇಶಗಳಿಗೆ ಪಕ್ಷಿಗಳ ಪ್ರವೇಶ ನಿರ್ಬಂಧಿಸಬೇಕು ಜೊತೆಗೆ ಝೂಗೆ ಬರುವ ಎಲ್ಲ ವಾಹನಗಳನ್ನು ಸ್ಯಾನಿಟೈಸ್ ಮಾಡಬೇಕು, ಝೂ ಒಳಗಿನ ಎಲ್ಲ ಜಲಮೂಲಗಳ ಮೇಲೆ ನಿಗಾ ಇಡಬೇಕು, ಕೃತಕ ಜಲಮೂಲಗಳ ನೀರನ್ನು ಬರಿದಾಗಿಸಬೇಕು ಎಂದೂ ಸೂಚಿಸಲಾಗಿದೆ.