ಬೆಂಗಳೂರು, ಫೆ. 19 (DaijiworldNews/SM): ಪಿಎಫ್ಐ ಸಂಘಟನೆ ನಾಯಕರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಖಡಕ್ ಸೂಚನೆ ನೀಡಿದ್ದಾರೆ.

ಮಂಗಳೂರಿನಲ್ಲಿ ಪಿಎಫ್ಐ ಮುಖಂಡರು ನೀಡಿರುವ ಹೇಳಿಕೆ ದೇಶ ವಿರೋಧಿ ಮತ್ತು ಅಸಂವಿಧಾನಿಕ ಎಂಬುವುದಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸಂಘಟನೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಗೂ ಅವರು ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿರುವುದಾಗಿ ಹೇಳಿದ್ದಾರೆ.
ಅಯೋಧ್ಯೆ ರಾಮಮಂದಿರ ಸಂಬಂಧ ಸುಪ್ರೀಂ ಕೋರ್ಟ್ ಈಗಾಗಲೇ ಆದೇಶ ನೀಡಿದೆ. ಈ ಕುರಿತು ಪಿಎಫಐ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡುತ್ತಿದೆ. ಅಲ್ಲದೆ ದೇಶ ಭಕ್ತ ಸಂಘಟನೆಯಾದ ಆರ್ ಎಸ್ ಎಸ್ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ. ಆ ಮೂಲಕ ಪಿಎಫ್ ಐ ಸಂಘಟನೆ ತನ್ನ ನೈಜತೆಯನ್ನು ಬಯಲಿಗೆಳೆದಿದೆ ಎಂದು ಅವರು ಹೇಳಿದ್ದಾರೆ.