ಬೆಂಗಳೂರು, ಫೆ. 20 (DaijiworldNews/HR): "2021–22ನೇ ಸಾಲಿನಲ್ಲಿ 28 ಲಕ್ಷ ರೈತರಿಗೆ 20 ಸಾವಿರ ಕೋಟಿ ಅಲ್ಪಾವಧಿ ಮತ್ತು ಮಧ್ಯಮಾವಧಿ ಬೆಳೆ ಸಾಲ ವಿತರಿಸುವ ಗುರಿ ಹೊಂದಿದೆ" ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.

ಈ ಕುರಿತು ಸಮಾರಂಭ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, "ಈ ಸಾಲಿನಲ್ಲಿ 24.50 ಲಕ್ಷ ರೈತರಿಗೆ 15,300 ಕೋಟಿ ಸಾಲ ವಿತರಣೆ ಗುರಿ ಹಾಕಿಕೊಳ್ಳಲಾಗಿದ್ದು, ಈವರೆಗೆ 22,02,931 ಲಕ್ಷ ರೈತರಿಗೆ 13,739.28 ಕೋಟಿ ಸಾಲ ವಿತರಿಸಲಾಗಿದ್ದು, ಮಾರ್ಚ್ 31 ರೊಳಗೆ ನೂರಕ್ಕೆ ನೂರು ಗುರಿ ತಲುಪುತ್ತೇವೆ" ಎಂದರು.
ಇನ್ನು "ಸಹಕಾರ ಇಲಾಖೆಯಲ್ಲಿ ಸುಗಮವಾಗಿ ಕಾರ್ಯ ನಿರ್ವಹಿಸಲು ಕಾಯ್ದೆಯಲ್ಲಿ ಯಾವುದೇ ತೊಡಕುಗಳಿದ್ದರೆ ಅದನ್ನು ನನ್ನ ಅಥವಾ ಇಲಾಖೆಯ ಗಮನಕ್ಕೆ ತಂದರೆ ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿ ಕಾಯ್ದೆಗೆ ತಿದ್ದುಪಡಿ ತರಲಾಗುವುದು" ಎಂದು ಭರವಸೆ ನೀಡಿದ್ದಾರೆ.