ನವದೆಹಲಿ, ಫೆ.20 (DaijiworldNews/MB) : ಟೂಲ್ ಕಿಟ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಬೆಂಗಳೂರಿನ ಹವಾಮಾನ ಕಾರ್ಯಕರ್ತೆ 22 ವರ್ಷ ದಿಶಾ ರವಿ ನ್ಯಾಯಾಂಗ ಬಂಧನಕ್ಕೆ ಒಳಗಾದ ಬಳಿಕ ದಿಶಾ ರವಿ ಅವರಿಗೆ ಸ್ವಿಡೀಸ್ ಹವಾಮಾನ ಕಾರ್ಯಕರ್ತೆ ಗ್ರೇಟಾ ಥನ್ ಬರ್ಗ್ ಬೆಂಬಲ ಸೂಚಿಸಿ ಟ್ವೀಟ್ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ವಾಕ್ ಸ್ವಾತಂತ್ರ್ಯ, ಶಾಂತಿಯುತ ಪ್ರತಿಭಟನೆ ಮತ್ತು ಸಭೆ ನಡೆಸುವುದು ಮಾನವ ಹಕ್ಕಾಗಿದೆ. ಇವು ಯಾವುದೇ ಪ್ರಜಾಪ್ರಭುತ್ವದ ಮೂಲಭೂತ ಭಾಗವಾಗಿದೆ ಎಂದು ಹೇಳಿದ್ದು, #StandWithDishaRavi ಎಂದು ಉಲ್ಲೇಖಿಸಿದ್ದಾರೆ.
ಕೇಂದ್ರ ಸರ್ಕಾರದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ರದ್ಧತಿಗೆ ಆಗ್ರಹಿಸಿ ರೈತರು ದೆಹಲಿಯ ವಿವಿಧ ಗಡಿಗಳಲ್ಲಿ ನವೆಂಬರ್ ೨೬ ರಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹೋರಾಟಕ್ಕೆ ಸಂಬಂಧಿಸಿದ ಟೂಲ್ಕಿಟ್ನ್ನು ನಿಕಿತಾ, ಶಾಂತನು ಮತ್ತು ದಿಶಾ ರವಿ ಎಡಿಟ್ ಮಾಡಿದ್ದಾರೆ. ಇದು ದೇಶದ್ರೋಹದ ಕೃತ್ಯ ಎಂದು ದೆಹಲಿ ಪೊಲೀಸರು ಆರೋಪಿಸಿದ್ದಾರೆ.