ಬೆಂಗಳೂರು, ಫೆ. 20 (DaijiworldNews/HR): "ಕರ್ನಾಟಕದಲ್ಲಿ ಲಾಕ್ಡೌನ್ ಅಥವಾ ಲಾಕ್ಡೌನ್ ಹೇರುವ ಸ್ಥಿತಿ ನಿರ್ಮಾಣವಾಗಿಲ್ಲ, ಆದರೆ ಜನರು ಸಾಕಷ್ಟು ಎಚ್ಚರ ವಹಿಸುವ ಅಗತ್ಯವಿದೆ" ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಹೇಳಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಮಹಾರಾಷ್ಟ್ರ, ಕೇರಳದಿಂದ ಕರ್ನಾಟಕಕ್ಕೆ ಬರುವವರನ್ನು ಕಟ್ಟುನಿಟ್ಟಾಗಿ ತಪಾಸಣೆ ನಡೆಸುವ ಸಂಬಂಧ ಸದ್ಯದಲ್ಲೇ ಗೃಹ ಹಾಗೂ ಕಂದಾಯ ಸಚಿವರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು" ಎಂದರು.
ಇನ್ನು "ಕರ್ನಾಟಕದಲ್ಲಿ ಲಾಕ್ಡೌನ್ ಹೇರುವ ಸ್ಥಿತಿ ನಿರ್ಮಾಣವಾಗಿಲ್ಲ, ಆದರೆ ಸಾರ್ವಜನಿಕರು ಈ ಕುರಿತು ಆದಷ್ಟು ಜಾಗೃತರಾಗಿರಬೇಕು" ಎಂದು ತಿಳಿಸಿದ್ದಾರೆ.