ಗಂಗಾವತಿ, ಫೆ.20 (DaijiworldNews/PY): "ರಾಮ ಮಂದಿರ ಬಗ್ಗೆ ಸಿದ್ದರಾಮಯ್ಯ ಅವರು ನೀಡಿರುವ ಹೇಳಿಕೆಯಿಂದ ಕಾಂಗ್ರೆಸ್ ಧೂಳಿಪಟವಾಗಲಿದೆ" ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಕಿಷ್ಕಿಂದಾ ಅಂಜನಾದ್ರಿಗೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣದ ವಿಚಾರದ ಬಗ್ಗೆ ಸಿದ್ದರಾಮಯ್ಯ ಅವರು ವಿವಾದಿತ ಜಾಗದಲ್ಲಿ ಮಂದಿರ ನಿರ್ಮಾಣ ಮಾಡಲು ದೇಣಿಗೆ ನೀಡುವುದಿಲ್ಲ ಎಂದು ಹೇಳಿದ್ದಾರೆ. ದೇಶದಲ್ಲಿ ಈಗಾಗಲೇ ಕಾಂಗ್ರೆಸ್ ಇಲ್ಲವಾಗಿದೆ. ಸಿದ್ದರಾಮಯ್ಯ ಅವರ ಹೇಳಿಕೆಯಿಂದ ಕಾಂಗ್ರೆಸ್ ಧೂಳಿಪಟವಾಗಲಿದೆ" ಎಂದಿದ್ದಾರೆ.
"ಕಿಷ್ಕಿಂದಾ ಅಂಜನಾದ್ರಿಯು ಎರಡನೇ ಅಯೋಧ್ಯೆಯಾಗಿದೆ. ಇದರ ಮೂಲ ಸೌಕರ್ಯ ಅಭಿವೃದ್ದಿಗೆ ಈಗಾಗಲೇ 20 ಕೋಟಿ ರೂ. ಬಿಡುಗಡೆಯಾಗಿದ್ದು, ಹೆಚ್ಚಿನ ಅನುದಾನ ಕೊಡಿಸಲು ಪ್ರಯತ್ನಿಸಲಾಗುತ್ತದೆ. ಸರ್ಕಾರವು ಉತ್ತರ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಸರ್ವತೋಮುಖ ಅಭಿವೃದ್ದಿಗೆ ಬದ್ದ" ಎಂದು ತಿಳಿಸಿದ್ದಾರೆ.