ಬೆಂಗಳೂರು, ಮಾ. 20(DaijiworldNews/HR): ಕರ್ನಾಟಕದಲ್ಲಿ ಉಪಚುನಾವಣೆಗೆ ದಿನಾಂಕ ನಿಗಧಿಯಾಗಿದ್ದು, ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪ್ರಚಾರಕ್ಕೆ ಸಿದ್ಧತೆ ನಡೆಸುತ್ತಿದೆ ಎನ್ನಲಾಗಿದೆ.

ರಾಯಚೂರಿನ ಮಸ್ಕಿಯಲ್ಲಿ ಇಂದು ಬಿಜೆಪಿ ಬೃಹತ್ ಸಮಾವೇಶ ನಡೆಸಲಿದ್ದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭಾಗವಹಿಸಿ ಪ್ರತಾಪ್ ಗೌಡ ಪಾಟೀಲ್ ಪರವಾಗಿ ಮತಯಾಚನೆ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನು ಬೆಳಗಾವಿ ಲೋಕಸಭೆ, ಮಸ್ಕಿ ಹಾಗೂ ಬಸವಕಲ್ಯಾಣ ವಿಧಾನಸಭೆ ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕುರಿತು ಇಂದು ಬಿಜೆಪಿ ಕೋರ್ ಕಮಿಟಿ ಸಭೆ ನಡೆಸಲಿದೆ ಎನ್ನಲಾಗಿದೆ.