ಮೈಸೂರು, ಮಾ. 20(DaijiworldNews/HR): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಬಂಧಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಸಿ.ಬಲರಾಮು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಮಾರ್ಚ್ 16ರಂದು ಮೈಮುಲ್ ಚುನಾವಣೆ ನಡೆದಿದ್ದು, ಮೈಮುಲ್ ನಿರ್ದೇಶಕ ಸ್ಥಾನದ ಚುನಾವಣೆಗೆ ಸ್ಪರ್ಧಿಸಿದ್ದ ಬಲರಾಮು ಸೋತಿದ್ದರು. ಮೈಮುಲ್ ಚುನಾವಣೆ ಸೋಲಿನ ಆಘಾತ ಮತ್ತಯ ಸಾಲಬಾಧೆ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಆತ್ಮಹತ್ಯೆಗೆ ಯತ್ನಿಸಿದ ಬಲರಾಮು ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸಿದೆ ಶನಿವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ - 9152987821