ಬೆಂಗಳೂರು, ಮಾ.20 (DaijiworldNews/PY): "ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ವಿಚಾರದ ಬಗ್ಗೆ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಿಲ್ಲ" ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಸಿ.ಡಿ ವಿಚಾರಕ್ಕೆ ಸಂಬಂಧಪಟ್ಟಂತೆ ಯಾವುದೇ ಚರ್ಚೆ ನಡೆದಿಲ್ಲ. ಈ ವಿಚಾರದ ಬಗ್ಗೆ ಏನು ಹೇಳಲು ಇಚ್ಛಿಸುವುದಿಲ್ಲ" ಎಂದಿದ್ದಾರೆ.
"ಸಭೆಯಲ್ಲಿ ಮಸ್ಕಿ, ಬೆಳಗಾವಿ ಹಾಗೂ ಬಸವಕಲ್ಯಾಣ ಉಪಚುನಾವಣೆಯ ವಿಚಾರದ ಬಗ್ಗೆ ಚರ್ಚೆ ಮಾಡಲಾಗಿದ್ದು, ಪಕ್ಷದ ನಾಯಕರೊಂದಿಗೆ ಸಮಾಲೋಚನೆ ನಡೆಸಿ, ಅಭ್ಯರ್ಥಿಗಳ ಹೆಸರನ್ನು ಹೈಕಮಾಂಡ್ಗೆ ಕಳುಹಿಸಲು ರಾಜ್ಯಾಧ್ಯಕ್ಷರಿಗೆ ನೀಡಲಾಗಿದೆ" ಎಂದು ತಿಳಿಸಿದ್ದಾರೆ.
"ಮಸ್ಕಿ ಕ್ಷೇತ್ರದಲ್ಲಿ ಪ್ರತಾಪ್ ಗೌಡ ಪಾಟೀಲ್ ಅವರಿಗೆ ನ್ಯಾಯ ಕೊಡಿಸಬೇಕಿದೆ" ಎಂದು ಹೇಳಿದ್ದಾರೆ.