ಮುಂಬೈ, ಮಾ.20 (DaijiworldNews/PY): ಮುಂಬೈನ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಸ್ಪೋಟ ಸಂಭವಿಸಿದ ಪರಿಣಾಮ ನಾಲ್ವರು ಕಾರ್ಮಿಕರು ಮೃತಪಟ್ಟು, ಓರ್ವ ಕಾರ್ಮಿಕ ಗಂಭೀರ ಗಾಯಗೊಂಡಿದ್ದಾನೆ ಎಂದು ತಿಳಿದುಬಂದಿದೆ.

ಸಾಂದರ್ಭಿಕ ಚಿತ್ರ
ಶನಿವಾರ ರತ್ನಗಿರಿ ಜಿಲ್ಲೆಯಲ್ಲಿ ಸ್ಥಿತಗೊಂಡಿರುವ ರಾಸಾಯನಿಕ ಕಾರ್ಖಾನೆಯ ಎಂಐಡಿಸಿ ಘಟಕದಲ್ಲಿ ಸ್ಪೋಟ ಸಂಭವಿಸಿದೆ.
ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.