ಸಿದ್ಧಿ, ಮಾ. 20(DaijiworldNews/HR) : ಮಧ್ಯಪ್ರದೇಶದಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿಯ ಜನನಾಂಗವನ್ನೇ ಮಹಿಳೆ ಕತ್ತರಿಸಿದ್ದು, ಇದೀಗ ಮಹಿಳೆ ಮತ್ತು ಪುರುಷ ಇಬ್ಬರ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಸಾಂಧರ್ಭಿಕ ಚಿತ್ರ
ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ45 ವರ್ಷದ ಮಹಿಳೆಯ ಮನೆಗೆ ನುಗ್ಗಿ ಅತ್ಯಾಚಾರಕ್ಕೆ ಯತ್ನಿಸಿದವನ ಮರ್ಮಾಂಗ ಕತ್ತರಿಸಿರುವುದಾಗಿ ಪೊಲೀಸರು ಶನಿವಾರ ತಿಳಿಸಿದ್ದಾರೆ.
ಗುರುವಾರ ರಾತ್ರಿ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಮೂಲಗಳು ತಿಳಿಸಿದ್ದು, ಘಟನೆ ನಡೆದ ವೇಳೆ ಮಹಿಳೆಯ ಪತಿ ಹೊರ ಹೋಗಿದ್ದರು ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
ಈ ಕುರಿತು ಖಡ್ಡಿ ಪೊಲೀಸ್ ಔಟ್ ಪೋಸ್ಟ್ ಉಸ್ತುವಾರಿ ಸಬ್ ಇನ್ಸ್ ಪೆಕ್ಟರ್ (ಎಸ್ ಐ) ಧರ್ಮೇಂದ್ರ ಸಿಂಗ್ ರಜಪೂತ್ ಅವರು ಮಾಹಿತಿ ನೀಡಿದ್ದು, "ತನ್ನನ್ನು ತಾನು ರಕ್ಷಿಸಿಕೊಳ್ಳಲು ಮಹಿಳೆ ತನ್ನ ಮಂಚದ ಕೆಳಗೆ ಬಿದ್ದ ಒಂದು ಕತ್ತಿಯನ್ನು ಎತ್ತಿಕೊಂಡು, ಪುರುಷನ ಜನನಾಂಗವನ್ನು ಕತ್ತರಿಸಿದ್ದಾಳೆ. ನಂತರ ಮಹಿಳೆ ಶುಕ್ರವಾರ ಮಧ್ಯಾಹ್ನ 1.30ರ ಸುಮಾರಿಗೆ ಪೊಲೀಸ್ ಔಟ್ ಪೋಸ್ಟ್ ಗೆ ಬಂದು ದೂರು ನೀಡಿದ್ದಾರೆ" ಎಂದು ರಜಪೂತ್ ತಿಳಿಸಿದ್ದಾರೆ.
ಇನ್ನು ಪೊಲೀಸರು ಆರೋಪಿಯನ್ನು ಪ್ರಥಮ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ದಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ರೇವಾ ಜಿಲ್ಲೆಯ ಸಂಜಯ್ ಗಾಂಧಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ.