ಮುಂಬೈ, ಮಾ. 26 (DaijiworldNews/SM): ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಳವಾಗುತ್ತಿದ್ದು, ಮಹಾರಾಷ್ಟ್ರದಲ್ಲಿ ಸೋಂಕಿನ ಪ್ರಮಾಣ ತೀವ್ರಗೊಂಡಿದೆ. ಈ ಹಿನ್ನೆಲೆಯಲ್ಲಿ ಮಹಾ ಸರಕಾರ ನೈಟ್ ಕರ್ಫ್ಯೂ ಜಾರಿ ಮಾಡಿದೆ.

ಮಹಾರಾಷ್ಟ್ರದಲ್ಲಿ ಕೋವಿಡ್ ಸೋಂಕು ಗಣನೀಯವಾಗಿ ಹೆಚ್ಚಳವಾಗುತ್ತಿದೆ. ಈ ಹಿನ್ನಲೆಯಲ್ಲಿ ಮಾರ್ಚ್ 28ರಿಂದ ಮಹಾರಾಷ್ಟ್ರದಲ್ಲಿ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ಈ ಬಗ್ಗೆ ಮಹಾರಾಷ್ಟ್ರ ಸಿಎಂ ಕಚೇರಿ ಮಾಹಿತಿ ನೀಡಿದೆ. ಕೋವಿಡ್-19 ಹರಡುವಿಕೆಯನ್ನು ತಡೆಯುವ ಸಲುವಾಗಿ ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ನಿಯಮಗಳನ್ನು 'ಕಟ್ಟುನಿಟ್ಟಾಗಿ ಜಾರಿಗೊಳಿಸಲು' ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಆದೇಶ ನೀಡಿದ್ದಾರೆ. ಮಹಾರಾಷ್ಟ್ರದಲ್ಲಿ ರಾತ್ರಿ 8ರಿಂದ ಬೆಳಿಗ್ಗೆ 7ರವರೆಗೆ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ.
ಈ ಬಗ್ಗೆ ಮುಖ್ಯಮಂತ್ರಿ ಕಚೇರಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದೆ. 'ಕೊರೊನಾ ವೈರಸ್ನಿಂದ ಅಪಾಯ ಎದುರಾಗುವುದು ಮುಗಿದಿಲ್ಲ. ಜನರು ಇದನ್ನು ಅರ್ಥಮಾಡಿಕೊಳ್ಳಬೇಕು. ಸೋಂಕು ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವುದು ಅನಿವಾರ್ಯವಾಗಿದೆ ಎಂದು ತಿಳಿಸಿದೆ.