ತಿರುವನಂತಪುರಂ, ಎ.15 (DaijiworldNews/PY): ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಕೊರೊನಾದಿಂದ ಚೇತರಿಸಿಕೊಂಡಿದ್ದು, ಕೋಯಿಕ್ಕೋಡ್ನ ವೈದ್ಯಕೀಯ ಕಾಲೇಜು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

"ಪಿಣರಾಯಿ ಅವರು ಆಸ್ಪತ್ರೆಗೆ ದಾಖಲಾದ ಏಳು ದಿನಗಳ ನಂತರ ಅವರಿಗೆ ಕೊರೊನಾ ನೆಗೆಟಿವ್ ವರದಿ ಬಂದಿದ್ದು, ಅವರು ಎಪ್ರಿಲ್ 14ರ ಬುಧವಾರದಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ" ಎಂದು ವೈದ್ಯರು ತಿಳಿಸಿದ್ದಾರೆ. ಸಿಎಂ ಪಿಣರಾಯಿ ವಿಜಯನ್ ಅವರಿಗೆ ಎಪ್ರಿಲ್ 8ರಂದು ಕೊರೊನಾ ಸೋಂಕು ದೃಢಪಟ್ಟಿತ್ತು.
ಮಾರ್ಚ್ 3ರಂದು ಪಿಣರಾಯಿ ವಿಜಯನ್ ಅವರು ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಕೊರೊನಾ ಲಸಿಕೆ ಹಾಕಿಸಿಕೊಂಡಿದ್ದರು. ಆದರೆ ಅವರು ಕೇರಳ ವಿಧಾನಸಭೆ ಹಿನ್ನೆಲೆ ಪ್ರಚಾರದ ಸಲುವಾಗಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದರು.
ಕೇರಳದಲ್ಲಿ ಎಪ್ರಿಲ್ 6ರಂದು ಮತದಾನ ನಡೆದಿದ್ದು, ಮೇ 2ರಂದು ಫಲಿತಾಂಶ ಪ್ರಕಟವಾಗಲಿದೆ.