ಬೀದರ್, ಏ. 15 (DaijiworldNews/SM): ಈಗಾಗಲೇ ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರದಿಂದಾಗಿ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ಎದುರಾಗಿದೆ. ಸರಕಾರದ ಬೊಕ್ಕಸಕ್ಕೆ ಭಾರೀ ನಷ್ಟವುಂಟಾಗಿದೆ. ಮತ್ತೊಂದೆಡೆ ಸಾರ್ವಜನಿಕರಿಗೆ ಉಂಟಾಗಿರುವ ಸಮಸ್ಯೆಯನ್ನು ದೂರ ಮಾಡಲು ಹೆಚ್ಚುವರಿ ಬಸ್ ಸಂಚಾರಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಾರಿಗೆ ಸಚಿವ, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಕರ್ತವ್ಯಕ್ಕೆ ಹಾಜರಾಗಲು ಹೆಚ್ಚಿನ ಸಂಖ್ಯೆಯ ನೌಕರರು ಮುಂದೆ ಬರುತ್ತಿದ್ದಾರೆ. ಶುಕ್ರವಾರ ಬೆಳಗ್ಗೆಯಿಂದ 5,000ಕ್ಕೂ ಹೆಚ್ಚು ಬಸ್ ಗಳು ಸಂಚರಿಸುವ ಭರವಸೆಯನ್ನು ಸಚಿವರು ವ್ಯಕ್ತಪಡಿಸಿದ್ದಾರೆ.