ಅಯೋಧ್ಯೆ, ಏ. 15 (DaijiworldNews/SM): ಇಲ್ಲಿ ಹಲವು ವರ್ಷಗಳ ಬೇಡಿಕೆಯಾಗಿದ್ದ ಶ್ರೀರಾಮ ದೇವಾಲಯ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಈ ಕಾರ್ಯಕ್ಕೆ ದೇಣಿಗೆ ನೀಡಿದ್ದ ಪೈಕಿ 15 ಸಾವಿರ ಚೆಕ್ಗಳು ಬೌನ್ಸ್ ಆಗಿವೆ ಎಂಬ ಬಗ್ಗೆ ವರದಿಯಾಗಿದೆ.

ರಾಮ ಮಂದಿರ ನಿರ್ಮಾಣಕ್ಕಾಗಿ ವಿಶ್ವ ಹಿಂದೂ ಪರಿಷತ್ ಸಂಗ್ರಹಿಸಿದ 22 ಕೋಟಿ ರೂ. ಮೌಲ್ಯದ ಸುಮಾರು 15 ಸಾವಿರ ಬ್ಯಾಂಕ್ ಚೆಕ್ ಬೌನ್ಸ್ ಆಗಿದೆ.
ದೇವಾಲಯದ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರ ಸ್ಥಾಪಿಸಿದ್ದ ಟ್ರಸ್ಟ್ ಶ್ರೀ ರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರದ ಲೆಕ್ಕಪರಿಶೋಧನಾ ವರದಿಯಲ್ಲಿ ಸ್ಪಷ್ಟನೆ ನೀಡಲಾಗಿದೆ. ಬ್ಯಾಂಕ್ ಖಾತೆಗಳಲ್ಲಿ ಹಣದ ಕೊರತೆ ಅಥವಾ ಕೆಲವು ತಾಂತ್ರಿಕ ದೋಷದಿಂದಾಗಿ ಚೆಕ್ಗಳು ಬೌನ್ಸ್ ಆಗಿವೆ ಎಂಬುವುದನ್ನು ಸಮಿತಿ ಉಲ್ಲೇಖಿಸಿದೆ. ಬೌನ್ಸ್ ಆಗಿರುವ ಚೆಕ್ ಗಳ ಪೈಕಿ ಸುಮಾರು 2,000 ಅಯೋಧ್ಯೆಯಿಂದಲೇ ಸಂಗ್ರಹಿಸಲಾಗಿತ್ತು.
ಇನ್ನು ಜನವರಿ ತಿಂಗಳ 15ರಿಂದ ದೇಣಿಗೆ ಸಂಗ್ರಹ ಅಭಿಯಾನ ಆರಂಭಗೊಂಡಿತ್ತು. ಫೆಬ್ರವರಿ 17ರ ಸಮಯದಲ್ಲಿ ಅಪಾರ ದೇಣಿಗೆ ಸಂಗ್ರಹಿಸಿದೆ.