ನವದೆಹಲಿ, ಏ.16 (DaijiworldNews/HR): ಕರ್ನಾಟಕದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಈ ಕುರಿತು ಟ್ವೀಟ್ ಮಾಡಿ ಮಾಹಿತಿ ನೀಡಿರುವ ರಣದೀಪ್, "ಇಂದು ಬೆಳಿಕ್ಕೆ ಕೊರೊನಾ ಪರೀಕ್ಷೆಯ ವರದಿ ಬಂದಿದ್ದು, ನನಗೆ ಕೊರೊನಾ ದೃಢಪಟ್ಟಿದೆ. ಕಳೆದ 5 ದಿನಗಳಿಂದ ನನ್ನೊಂದಿಗೆ ಸಂಪರ್ಕದಲ್ಲಿದ್ದ ಎಲ್ಲರೂ ಪರೀಕ್ಷೆಗೊಳಪಡಬೇಕು, ಸೆಲ್ಫ್ ಐಸೋಲೇಷನ್ ಗೊಳಪಟ್ಟು ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿಕೊಳ್ಳುತ್ತಿದ್ದೇನೆ" ಎಂದು ಹೇಳಿದ್ದಾರೆ.
ಇನ್ನು ದೇಶದಾದ್ಯಂತ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮುಂಜಾಗ್ರತ ಕ್ರಮಗಳನ್ನು ಕಡ್ದಾಯವಾಗಿ ಪಾಲಿಸುವಂತೆ ಸರ್ಕಾರ ಮನವಿ ಮಾಡಿಕೊಂಡಿದೆ.