ಮುಂಬಯಿ, ಏ.16 (DaijiworldNews/HR): ಕೊರೊನಾ ಪ್ರಕಾರಣ ಮಹಾರಾಷ್ಟ್ರದಲ್ಲಿ ಹೆಚ್ಚಾಗಿ ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಮುಂಬೈಯಲ್ಲಿಯೇ ಭಾರತ್ ಬಯೋಟೆಕ್ನ ಕೋವ್ಯಾಕ್ಸಿನ್ ಉತ್ಪಾದಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ತಿಳಿದು ಬಂದಿದೆ.

ಸಾಂಧರ್ಭಿಕ ಚಿತ್ರ
ಕೊರೊನಾ ಲಸಿಕೆ ಕೊರತೆ ಇರುವ ಹಿನ್ನೆಲೆಯಲ್ಲಿ ಲಸಿಕೆ ಉತ್ಪಾದನೆಗೆ ಅವಕಾಶ ನೀಡಬೇಕೆಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮನವಿ ಮಾಡಿಕೊಂಡಿದ್ದರು.
ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಕೋವ್ಯಾಕ್ಸಿನ್ ಲಸಿಕೆಯನ್ನು ಉತ್ಪಾದಿಸುತ್ತಿದೆ ಎಂದು ಮುಖ್ಯಮಂತ್ರಿ ಕಚೇರಿಯ ಅಧಿಕಾರಿಗಳು ತಿಳಿಸಿದೆ.
ಮುಂಬೈನಲ್ಲಿಯೇ ಕೋವ್ಯಾಕ್ಸಿನ್ ತಯಾರಿಕೆಗೆ ಅನುಮತಿ ನೀಡಬೇಕೆಂಬ ಠಾಕ್ರೆ ಅವರ ಮನವಿ ಮೇರೆಗೆ ಕೇಂದ್ರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ ರೇಣು ಸ್ವರೂಪ್ ಅವರು ಅನುಮತಿಯ ಪತ್ರವನ್ನು ಮಹಾರಾಷ್ಟ್ರ ಮುಖ್ಯಕಾರ್ಯದರ್ಶಿ ಸೀತಾರಾಮ್ ಕುಂಟೆ ಅವರಿಗೆ ಕಳುಹಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಮುಂಬೈ ಮೂಲದ ಹಾಫ್ ಕಿನ್ ಇನ್ಸ್ ಟಿಟ್ಯೂಟ್ ಕೋವ್ಯಾಕ್ಸಿನ್ ತಯಾರಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿರುವುದಾಗಿ ಸ್ವರೂಪ್ ಮಾಹಿತಿ ನೀಡಿದ್ದು, ಹಾಫ್ ಕಿನ್ ಕೋವ್ಯಾಕ್ಸಿನ್ ಉತ್ಪಾದಿಸುವ ಬಗ್ಗೆ ತಜ್ಞರು ಅನುಮತಿ ನೀಡಿದ ಬಳಿಕ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ವರದಿ ವಿವರಿಸಿದೆ.