ಬೆಂಗಳೂರು, ಏ.16 (DaijiworldNews/HR): ದೇಶದಾದ್ಯಂತ ಕೊರೊನಾ ಪ್ರಕರಣಗಳು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ತಾಜ್ ಮಹಲ್ ಸೇರಿದಂತೆ ದೇಶದ ಇತರ ಪ್ರವಾಸಿ ತಾಣಗಳು 1 ತಿಂಗಳು ಮಚ್ಚಲಾಗುತ್ತದೆ ಎಂದು ಕೇಂದ್ರ ಸಂಸ್ಕೃತಿ ಸಚಿವಾಲಯ ಆದೇಶ ಹೊರಡಿಸಿದೆ.

ತಾಜ್ ಮಹಲ್
ಕರ್ನಾಟಕದ ಹಂಪಿ ಸ್ಮಾರಕಗಳು ಮತ್ತು ಮ್ಯೂಸಿಯಂಗಳ ಪ್ರವೇಶವನ್ನು ಇಂದಿನಿಂದಲೇ ಪ್ರವಾಸಿಗರ ನಿರ್ಬಂಧಕ್ಕೆ ಆದೇಶ ನೀಡಲಾಗಿದ್ದು, ದೇಶಾದ್ಯಂತ ಐತಿಹಾಸಿಕ ಸ್ಮಾರಕಗಳ ವೀಕ್ಷಣೆ ಬಂದ್ಗೆ ಆದೇಶಿಸಲಾಗಿದೆ.
ಮೇ 15 ವರೆಗೆ ಹಂಪಿಯ ಸ್ಮಾರಕಗಳ ವೀಕ್ಷಣೆಯನ್ನು ಬಂದ್ ಮಾಡಲು ನಿರ್ಧಾರಿಸಲಾಗಿದ್ದು, ಭಾರತೀಯ ಪುರಾತತ್ವ ಇಲಾಖೆ ಸ್ಮಾರಕಗಳ ನಿರ್ದೇಶಕ ಎನ್.ಕೆ ಪಾಠಕ್ರವರು ಆದೇಶ ಹೊರಡಿಸಿದ್ದಾರೆ.