ಚೆನ್ನೈ, ಎ.16 (DaijiworldNews/PY): ಖ್ಯಾತ ತಮಿಳು ನಟ ವಿವೇಕ್ ಅವರು ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ವರದಿಗಳ ಪ್ರಕಾರ, "ವಿವೇಕ್ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ" ಎಂದು ವೈದ್ಯರು ತಿಳಿಸಿದ್ದಾರೆ.
59 ವರ್ಷದ ನಟ ವಿವೇಕ್ ಅವರು ಗುರುವಾರವಷ್ಟೇ ಕೊರೊನಾ ಲಸಿಕೆ ಪಡೆದಿದ್ದರು. ಲಸಿಕೆ ಪಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ್ದ ಅವರು, "ಅರ್ಹ ಜನರು ಕೊರೊನಾ ಲಸಿಕೆ ಪಡೆಯುವಂತೆ ಮನವಿ ಮಾಡಿದ್ದರು. ಕೊರೊನಾ ಸೋಂಕಿನಿಂದ ತಮ್ಮ ರಕ್ಷಿಸಿಕೊಳ್ಳಲು ಮುಂಜಾಗ್ರತಾ ಕ್ರಮಗಳಲ್ಲಿ ಪಾಲಿಸಿ" ಎಂದಿದ್ದರು.
ವಿವೇಕ್ ಅವರು 220 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಸಿನಿಮಾರಂಗಕ್ಕೆ ನೀಡಿದ ಕೊಡುಗೆಗಾಗಿ ಭಾರತ ಸರ್ಕಾರ ಇವರಿಗೆ 2009ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದೆ.