ಪಶ್ಚಿಮ ಬಂಗಾಳ, ಎ.18 (DaijiworldNews/PY): "ಪ್ರಧಾನಿ ನರೇಂದ್ರ ಮೋದಿ ಅವರು ಕೊರೊನಾ ನಿಯಂತ್ರಿಸುವಲ್ಲಿ ವಿಫಲರಾಗಿದ್ದಾರೆ. ಅವರು ರಾಜೀನಾಮೆ ಕೊಡಬೇಕು" ಎಂದು ಪಶ್ಚಿಮಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಒತ್ತಾಯಿಸಿದ್ದಾರೆ.

"ಕೊರೊನಾ ಎರಡನೇ ಅಲೆಯಿಂದಾಗಿ ಉಂಟಾದ ಬಿಕ್ಕಟ್ಟನ್ನು ಸರಿಪಡಿಸುವಲ್ಲಿ ಪ್ರಧಾನಿ ಮೋದಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ. ದೇಶದಲ್ಲಿ ಕೊರೊನಾ ನಿಯಂತ್ರಿಸಲಾಗದ ಅವರು, ಬೇರೆ ದೇಶಗಳಿಗೆ ಕೊರೊನಾ ಲಸಿಕೆಯನ್ನು ಪೂರೈಕೆ ಮಾಡಿದ್ದಾರೆ. ದೇಶದಲ್ಲಿ ಕೊರೊನಾ ಲಸಿಕೆ ಕೊರತೆ ಇರುವುವ ಅವರಿಗೆ ಕಾಣುವುದಿಲ್ಲವೇ" ಎಂದು ಪ್ರಶ್ನಿಸಿದ್ದಾರೆ.
"ಪ್ರಧಾನಿ ಮೋದಿ ಕೈಗೊಂಡಿರುವ ತೀರ್ಮಾನಗಳೇ ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದಕ್ಕೆ ಕಾರಣ. ಕೂಡೇ ಅವರು ರಾಜೀನಾಮೆ ನೀಡಬೇಕು" ಎಂದು ಆಗ್ರಹಿಸಿದ್ದಾರೆ.
ಪಶ್ಚಿಮ ಬಂಗಾಳ ಕೊರೊನ ಪರಿಸ್ಥಿತಿಯನ್ನು ವಿವರಿಸಿದ ಅವರು, "ರಾಜ್ಯದ ಪ್ರತಿಯೋರ್ವ ನಾಗರಿಕರಿಗೂ ಉಚಿತವಾಗಿ ಕೊರೊನಾ ಲಸಿಕೆ ನೀಡುವ ನಿಟ್ಟಿನಲ್ಲಿ ಬಂಗಾಳ ಸರ್ಕಾರ 5.4 ಕೋಟಿ ಡೋಸ್ ಲಸಿಕೆ ಕೇಳಿತ್ತು. ಈ ಬಗ್ಗೆ ಇಲ್ಲಿಯವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ಬಗ್ಗೆ ನಾನು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆಯುತ್ತೇನೆ. ದೇಶದಲ್ಲಿ ಆಮ್ಲಜನಕ ಹಾಗೂ ರೆಮ್ಡೆಸಿವಿರ್ ಕೊರೊತೆಯಾಗಿರುವುದಕ್ಕೆ ಯಾರು ಕಾರಣ?" ಎಂದು ಕೇಳಿದ್ದಾರೆ.
"ಬೇರೆ ದೇಶಗಳಿಗೆ ಕೊರೊನಾ ಲಸಿಕೆ ಪೂರೈಕೆ ಮಾಡಿರುವುದಕ್ಕೆ ನಮಗೆ ಆಕ್ಷೇಪವಿಲ್ಲ. ಆದರೆ, ದೇಶದಲ್ಲೇ ಲಸಿಕೆಗಳ ಕೊರತೆ ಇದೆ. ಮೊದಲು ಉತ್ತರ ಪ್ರದೇಶಶ ಸೇರಿದಂತೆ ಎಲ್ಲಾ ರಾಜ್ಯಗಳಿಗೆ ಕೊರೊನಾ ಲಸಿಕೆ ಪೂರೈಸಿ. ಇದನ್ನು ಮಾಡುವುದರಲ್ಲಿಯೂ ಪ್ರಧಾನಿ ಮೋದಿ ವಿಫಲರಾಗಿದ್ದಾರೆ" ಎಂದಿದ್ದಾರೆ.